Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜ.21ರಂದು ಕುಲಾಲ ಸುಧಾರಕ ಸಂಘ (ರಿ.) ಬಿಸಿರೋಡು ಇದರ ವತಿಯಿಂದ ಕುಲಾಲ ಸಂಘಗಳ ಸಾಂಸ್ಕೃತಿಕ ಸಂಭ್ರಮ – ಕಹಳೆ ನ್ಯೂಸ್

ಬಂಟ್ವಾಳ: ಕುಲಾಲ ಸುಧಾರಕ ಸಂಘ (ರಿ.) ಬಿಸಿರೋಡು ಇದರ ವತಿಯಿಂದ ಜ.21 ರಂದು ಬಿಸಿರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಕರಾವಳಿ 2024, ಕರಾವಳಿ ಕುಲಾಲರ ಕಲಾಂಜಲಿ ಅವಿಭಜಿತ ಜಿಲ್ಲೆಯ ಕುಲಾಲ ಸಂಘಗಳ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ ತಿಳಿಸಿದರು.

ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ಸಮುದಾಯ ಭವನದ ಮೇಲಂತಸ್ತಿನ ಕಾಮಗಾರಿಗೆ ಅರ್ಥಿಕ ಕ್ರೋಡಿಕರಣದ ಸದುದ್ದೇಶ ಹೊಂದಿದ್ದೇವೆ. ಜಿಲ್ಲೆಯ ಸುಮಾರು 15 ತಂಡಗಳು ಸಾಂಸ್ಕೃತಿಕ ಸಂಭ್ರಮ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ತಂಡಗಳಿಗೆ ಗೌರವ, ಪ್ರೋತ್ಸಾಹ ಧನ ನೀಡಲಿದ್ದೇವೆ. ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ ತಂಡಕ್ಕೆ ರೂ.15 ಸಾವಿರ, ದ್ವೀತಿಯ ರೂ.10 ಸಾವಿರ ಹಾಗೂ ತೃತೀಯ ರೂ.8 ಸಾವಿರ ಹಣವನ್ನು ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳಿಗ್ಗೆ ಖ್ಯಾತ ರಂಗ ನಿರ್ದೇಶಕ, ಕಲಾವಿದ ರಮಾ ಬಿಸಿರೋಡು ಕಾರ್ಯಕ್ರಮದ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಚಲನಚಿತ್ರ ನಟ ಮನೋಜ್ ಪುತ್ತೂರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

ಮಧ್ಯಾಹ್ನ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಮಾಜಿ ಸಚಿವ ಬಿ.ರಮಾನಾಥ ರೈ ಸಹಿತ ಅನೇಕ ಗಣ್ಯರು ಉಪಸ್ಥಿತರಿರುತ್ತಾರೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಸುಕುಮಾರ್ ಬಂಟ್ವಾಳ್, ಪ್ರಧಾನ ಕಾರ್ಯದರ್ಶಿ ಕೇಶವ ಮಾಸ್ತರ್, ಕೋಶಾಧಿಕಾರಿ ರಮೇಶ್ ಸಾಲಿಯಾನ್, ಸಮಿತಿ ಸದಸ್ಯ ದಾಮೋದರ ಏರ್ಯ ಉಪಸ್ಥಿತರಿದ್ದರು.