Recent Posts

Friday, November 22, 2024
ಉಡುಪಿ

ಉದ್ಯಾವರ ಗ್ರಾಮ ಪಂಚಾಯತ್ ವಿಕಸಿತ ಭಾರತ ಸಂಕಲ್ಪ ಯಾತ್ರೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ -ಕಹಳೆ ನ್ಯೂಸ್

ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ನವೆಂಬರ್ 15 ರಿಂದ ಜನವರಿ 26ರವರೆಗೆ ನಡೆಯುತ್ತಿರುವ “ವಿಕಸಿತ ಭಾರತ ಸಂಕಲ್ಪ ಯಾತ್ರೆ”ಗೆ ಇಂದು ದಿನಾಂಕ 17-01-2024 ರಂದು ಉದ್ಯಾವರ ಗ್ರಾಮ ಪಂಚಾಯತ್ ಬಳಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಶಾಸಕರು ಮುದ್ರಾ ಯೋಜನೆ ಅಡಿ ಮಂಜೂರಾದ ಸಾಲ ಸೌಲಭ್ಯ ಆದೇಶ ಪತ್ರವನ್ನು ವಿತರಿಸಿ ದೀನ್ ದಯಾಳ್ ಅಂತ್ಯೋದಯ ಯೋಜನೆ ಅಡಿಯಲ್ಲಿ ಸ್ವಸಹಾಯ ಸಂಘಗಳಿಗೆ ಮಂಜೂರಾದ ಸಹಾಯಧನ ವಿತರಣೆ ಮಾಡಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಗಳನ್ನು ಫಲಾನುಭವಿಗಳಿಗೆ ವಿತರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು, ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು, ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲತಿ ಸಾಲ್ಯಾನ್, ಉಪಾಧ್ಯಕ್ಷರಾದ ರಾಜೇಶ್ ಕುಂದರ್ ಲೀಡ್ ಬ್ಯಾಂಕ್ ಪ್ರಬಂಧಕರಾದ ಬೀರ್ ಸಾಬ್ ಪಿಂಜಾರ, ವಿಕಸಿತ ಭಾರತ ಸಂಕಲ್ಪ ಯಾತ್ರೆ ನೊಡಲ್ ಅಧಿಕಾರಿಗಳಾದ ಮಧುರಾ, ಅಂಚೆ ಇಲಾಖೆಯ ಮಂಜುನಾಥ್, ಕೃಷಿ ಇಲಾಖೆಯ ವೆಂಕಟೇಶ್, ರುಡ್ ಸೆಟ್ ಸಂಸ್ಥೆಯ ಶಾಂತಪ್ಪ, ಜಿಲ್ಲಾ ಆಸ್ಪತ್ರೆಯ ಆರೋಗ್ಯ ಮಿತ್ರ ಹರೀಶ್, ಉದ್ಯಾವರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರಮೇಶ್, ಹಾಗೂ ಉದ್ಯಾವರ ಗ್ರಾಮ ಪಂಚಾಯತ್ ಸರ್ವ ಸದಸ್ಯರು ಉಪಸ್ಥಿತರಿದ್ದರು.