Sunday, January 19, 2025
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆಎಲ್ ರಾಹುಲ್ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ ನೀಡಿದ್ದಾರೆ. ಈ ಹಿಂದೆ 2023ರ ವಿಶ್ವ ಕಪ್ ಟೂರ್ನಿಯು ಆರಂಭವಾಗುವ ಮುನ್ನ ರಾಹುಲ್ ಗಾಯಾಳು ಆಗಿದ್ದರು, ಹಾಗಾಗಿ ವಿಶ್ವ ಕಪ್ ತಂಡದಲ್ಲಿ ಅವರ ಸ್ಥಾನ ಅನುಮನಕರವಾಗಿತ್ತು ಹಾಗಾಗಿ ಕಳೆದ ಜೂನ್ 25ರಂದು ರಾಹುಲ್ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಸೇವೆ ಸಲ್ಲಿಸಿದರು ನಂತರದಲ್ಲಿ ರಾಹುಲ್ 2023ರ ವಿಶ್ವ ಕಪ್ ಟೂರ್ನಿಯಲ್ಲಿ ಅಬ್ಬರದ ಬ್ಯಾಟಿಂಗ್ ಮಾತ್ರವಲ್ಲದೆ ವಿಕೆಟ್ ಕೀಪಿಂಗ್ ನಲ್ಲೂ ಕೂಡ ಕಮಾಲ್ ಮಾಡಿರೋದು ನಿಮಗೆಲ್ಲರಿಗೂ ಗೊತ್ತಿದೆ. ಇದೀಗ ಐಪಿಎಲ್ ಹಾಗೂ ಟಿ20 ವಿಶ್ವಕಪ್ ಟೂರ್ನಿಯು ಸಮೀಪಿಸುತ್ತಿರುವ ಬೆನ್ನಲ್ಲೇ ಮತ್ತೆ ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಟಿ20 ವಿಶ್ವಕಪ್ ತಂಡದಲ್ಲಿ ರಾಹುಲ್ ಗೆ ಸ್ಥಾನ ಸಿಗುವುದು ಕಷ್ಟ ಎನ್ನಲಾಗಿದೆ, ಒಂದು ವೇಳೆ ರಾಹುಲ್ ಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಲಭಿಸಬೇಕಾದರೆ ಬರುವ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಲೇಬೇಕಾಗಿದೆ ಹಾಗಾಗಿ ಐಪಿಎಲ್ ಟೂರ್ನಿಗೂ ಮುನ್ನ ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದಾರೆ ಎನ್ನಲಾಗುತ್ತಿದೆ.