Recent Posts

Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಲೆತ್ತೂರು ವಲಯದ ವತಿಯಿಂದ ಶ್ರೀನಿಲ್ಯ ದೈವಸ್ಥಾನದ ಜೀರ್ಣೋದ್ಧಾರಕ್ಕೆ ಮಂಜೂರಾದ ರೂ.1ಲಕ್ಷ ಸಹಾಯಧನ ದೇವಸ್ಥಾನಕ್ಕೆ ಹಸ್ತಾಂತರ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಲೆತ್ತೂರು ವಲಯದ ವತಿಯಿಂದ ಸಜೀಪಮೂಡ ಗ್ರಾಮದ ಶ್ರೀನಿಲ್ಯ ದೈವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಕ್ಷೇತ್ರದಿಂದ ರೂ.1 ಲಕ್ಷ ಸಹಾಯಧನ ಮಂಜೂರಾಗಿದ್ದು ಸಹಾಯಧನ ಡಿ.ಡಿ ಯನ್ನು ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಸಜೀಪ ಮೂಡ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ರಮೇಶ್ ನಾಯ್ಕ ಕೋಮಾಲಿ, ಒಕ್ಕೂಟದ ಪದಾಧಿಕಾರಿಗಳಾದ ಉಮಾವತಿ, ಶ್ರೀ ನೀಲ್ಯ ದೈವಸ್ಥಾನದ ಟ್ರಸ್ಟ್ ನ ಅಧ್ಯಕ್ಷರಾದ ಜಯಂತ್ ಸಾಲಿಯಾನ್, ಕೋಶಾಧಿಕಾರಿ ಸುರೇಶ್ ಪೂಜಾರಿ ,ಸಮಿತಿಯ ಸದಸ್ಯರಾದ ಸುನಿಲ್ ಕುಮಾರ್, ಜಾರಪ್ಪ ಪೂಜಾರಿ ,ಗೋಪಾಲ, ಯೋಜನೇಯ ವಿಟ್ಲ ತಾಲ್ಲೂಕು ಕೃಷಿ ಅಧಿಕಾರಿ ಚಿದಾನಂದ, ಸಾಲೆತ್ತೂರು ವಲಯ ಮೇಲ್ವಿಚಾರಕಿ ಮೋಹಿನಿ, ಸೇವಾ ಪ್ರತಿನಿಧಿ ಪ್ರಮೀಳಾ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು