Sunday, January 19, 2025
ಸಿನಿಮಾ

ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ಮದುವೆ.

ಬೆಂಗಳೂರು : ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ಪ್ರೀತಿ ಮಾಡ್ತಿದ್ದಾರೆ. ಈ ಜೋಡಿಗಳು ಸದ್ಯದಲ್ಲೇ ಮದುವೆಯಾಗಲಿದ್ದಾರೆ ಅನ್ನೋ ಸುದ್ದಿ ಗಾಂಧಿನಗರದಲ್ಲಿ ಕಳೆದ ಎರಡು ವರ್ಷಗಳಿಂದ ಕೇಳಿ ಬರ್ತಿದೆ. ಎರಡು ಚಿತ್ರದಲ್ಲಿ ಒಟ್ಟಿಗೆ ಸ್ಕ್ರೀನ್ ಶೇರ್ ಮಾಡಿದ್ದ ಚಿರು ಹಾಗೂ ಮೇಘನಾ ಖಾಸಗಿ ಕಾರ್ಯಕ್ರಮಗಳಲ್ಲೂ ಒಟ್ಟಿಗೆ ಕಾಣಿಸಿಕೊಂಡು ಸುದ್ದಿಯಾಗಿದ್ರು. ಸದ್ಯ ಮತ್ತೊಂದು ಸುದ್ದಿ ಕನ್ನಡ ಸಿನಿ ಇಂಡಸ್ಟ್ರಿಯಲ್ಲಿ ಕೇಳಿ ಬರ್ತಿದೆ. ಅಂದ್ಹಾಗೆ ನಟಿ ಮೇಘನಾ ಹಾಗೂ ಚಿರು ಇದೇ ಡಿಸೆಂಬರ್ ಎರಡನೇ ವಾರದಲ್ಲಿ ಸಪ್ತಪದಿ ತುಳಿಯಲ್ಲಿದ್ದಾರೆ ಅನ್ನೋ ಗುಸು ಗುಸು ಕೇಳಿ ಬರ್ತಿದೆ. ಆದ್ರೆ ಈ ಬಗ್ಗೆ ಸ್ಪಷ್ಟ ಪಡಿಸಿರುವ ಜೋಡಿ ತಮ್ಮ ಮದುವೆಯನ್ನ ನಿರಾಕರಿಸಿದ್ದಾರೆ. ಅಲ್ಲದೆ ತಮ್ಮ ಮದುವೆಯ ಬಗ್ಗೆ ಯಾಕೆ ಇಷ್ಟೊಂದು ಸುದ್ದಿ ಹಬ್ಬುತ್ತಿದೆಯೋ ಗೊತ್ತಿಲ್ಲ ಅಂತ ಹೇಳಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು

Leave a Response