Recent Posts

Tuesday, January 21, 2025
ಸುದ್ದಿ

ಕಾಪು ಪುರಸಭಾ ವ್ಯಾಪ್ತಿಯ ವಿಕಸಿತ ಭಾರತ ಸಂಕಲ್ಪ ಯಾತ್ರೆ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ – ಕಹಳೆ ನ್ಯೂಸ್

ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ನವೆಂಬರ್ 15 ರಿಂದ ಜನವರಿ 26ರವರೆಗೆ ನಡೆಯುತ್ತಿರುವ “ವಿಕಸಿತ ಭಾರತ ಸಂಕಲ್ಪ ಯಾತ್ರೆ”ಗೆ ನಿನ್ನೆ ಕಾಪು ಪುರಸಭೆಯ ಬಳಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಅಹಾರ ಸಂಸ್ಕರಣ ಉದ್ಯಮ ಇಲಾಖೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ವಿಕಸಿತ ಭಾರತ ಸಂಕಲ್ಪ ಯಾತ್ರೆ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುದ್ರಾ ಯೋಜನೆ ಅಡಿ ಮಂಜೂರಾದ ಸಾಲ ಸೌಲಭ್ಯ ಆದೇಶ ಪತ್ರವನ್ನು ವಿತರಿಸಿ ಪ್ರಧಾನಮಂತ್ರಿ ಉಜ್ವಲ ಯೋಜನೆಮಡಿ ಮಂಜೂರಾದ ಉಚಿತ ಗ್ಯಾಸ್ ಸಂಪರ್ಕವನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.

ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು, ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು, ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ಸಂತೋಷ್, ಕಾಪು ತಹಶೀಲ್ದಾರರಾದ ಪ್ರತಿಭಾ, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಲೀಡ್ ಬ್ಯಾಂಕ್ ಪ್ರಬಂಧಕರಾದ ಬೀರ್ ಸಾಬ್ ಪಿಂಜಾರ, ನಬಾರ್ಡ್ ನ ಸಂಗೀತಾ ಕರ್ತ, ಕೆನರಾ ಬ್ಯಾಂಕ್ ಪ್ರಾದೇಶಿಕ ಪ್ರಬಂಧಕರಾದ ಸಂತ್ಮಿದೆರ್ ಸಿಂಗ್, ಬ್ಯಾಂಕ್ ಆಫ್ ಬರೋಡಾ ಉಪ ಪ್ರಾದೇಶಿಕ ಪ್ರಬಂಧಕರಾದ ವಿದ್ಯಾಧರ ಶೆಟ್ಟಿ, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ. ಧನಂಜಯ್ ಹಾಗೂ ಪುರಸಭೆಯ ಸದಸ್ಯರು ಉಪಸ್ಥಿತರಿದ್ದರು.