Monday, January 20, 2025
ದಕ್ಷಿಣ ಕನ್ನಡಬಂಟ್ವಾಳ

ಶ್ರೀಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ವತಿಯಿಂದ ಬಂಟ್ವಾಳ ಕುಲಾಲ ಸುಧಾರಕ ಸಂಘದ ಮೇಲಂತಸ್ತಿನ ಕಟ್ಟಡ ಕಾಮಗಾರಿಗೆ ಮಂಜೂರಾದ 3ಲಕ್ಷದ ಡಿಡಿಯನ್ನು ಕಟ್ಟಡ ಸಮಿತಿಯ ಅಧ್ಯಕ್ಷರಿಗೆ ಹಸ್ತಾಂತರ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯಿಂದ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಮೇಲಂತಸ್ತಿನ ಕಟ್ಟಡ ಕಾಮಗಾರಿಗೆ ರೂ. 3ಲಕ್ಷದ ಡಿಡಿ ಕಟ್ಟಡ ಸಮಿತಿಯ ಅಧ್ಯಕ್ಷ ಸುರೇಶ್ ಕುಮಾರ್ ನಾವೂರರವರಿಗೆ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಮತ್ತು ಯೋಜನಾಧಿಕಾರಿ ಮಾಧವ ಗೌಡ ರವರ ಮುಖೇನ ಪೆÇಸಳ್ಳಿ ಕುಲಾಲ ಭವನದಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಯೋಜನೆಯ ಮೇಲ್ವಿಚಾರಕ ವೇದಾವತಿ, ಒಕ್ಕೂಟದ ಅಧ್ಯಕ್ಷ ಹೇಮಾವತಿ, ಸೇವಾ ಪ್ರತಿನಿಧಿಗಳು, ಪುರಸಭಾ ಸದಸ್ಯ ಹರಿಪ್ರಸಾದ್ ಭಂಡಾರಿಬೆಟ್ಟು, ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಮೀನಾಕ್ಷಿ ಅಲೆತ್ತೂರು, ಮನೋಹರ ನೇರಂಬೋಳು, ಸುಕುಮಾರ್ ಬಂಟ್ವಾಳ, ನಾರಾಯಣ್ ಸಿ ಪೆರ್ನೆ, ರಮೇಶ್ ಕೈಕುಂಜೆ, ಸತೀಶ್ ಕುಲಾಲ್, ಲಕ್ಷ್ಮಣ ಅಗ್ರಬೈಲು, ನಾಗೇಶ್ ಬಾಳೆಹಿತ್ಲು, ಜನಾರ್ಧನ ಪೆÇಸಳ್ಳಿ, ಮಚ್ಚೇಂದ್ರ ಸಾಲಿಯಾನ್, ಕಟ್ಟಡ ಕಾಮಗಾರಿಯ ಗುತ್ತಿಗೆದಾರ ಹರೀಶ್ ಭಂಡಾರಿಬೆಟ್ಟು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು