Monday, January 20, 2025
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಶ್ರೀರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಅಂಗವಾಗಿ ಜ.22ರಂದು ಬಂಟ್ವಾಳ ತಾಲೂಕಿನ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಸ್ಥಗಿತಗೊಳಿಸುವಂತೆ ಮನವಿ – ಕಹಳೆ ನ್ಯೂಸ್ಕಾನಂದ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಶ್ರೀರಾಮೋತ್ಸವ- ‘ವೀರರಾಮ ಸ್ಮರಣೆ’- ಕಹಳೆ ನ್ಯೂಸ್

ಬಂಟ್ವಾಳ : ಜ.22 ರಂದು ಸೋಮವಾರ ಆಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ತಾಲೂಕಿನ ಎಲ್ಲಾ ಅಂಗಡಿಗಳನ್ನು, ವ್ಯವಹಾರಗಳನ್ನು, ಉದ್ಯಮಗಳನ್ನು ಸ್ವಯಂಪ್ರೇರಿತವಾಗಿ ಸ್ಥಗಿತಗೊಳಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಂಬುದು ಕಳಕಳಿಯ ಮನವಿ ಎಂದು ಅಕ್ಷತೆ ವಿತರಣಾ ಸಮಿತಿ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹಸಂಚಾಲಕ ಪ್ರಸಾದ ಕುಮಾರ್ ರೈ ಹೇಳಿದರು.
ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಕಾರ್ಯಕರ್ತರು ಪ್ರತಿ ಅಂಗಡಿಗಳಿಗೆ ತೆರಳಿ ಮನವೊಲಿಸುವ ಪ್ರಯತ್ನ ಮಾಡಲಿದ್ದಾರೆ ಎಂದು ತಿಳಿಸಿದರು.
ಜ.22ರಂದು ಬೆಳಿಗ್ಗೆ 9 ಗಂಟೆಗೆ ಪ್ರತಿ ಗ್ರಾಮದ ಕೇಂದ್ರಗಳಲ್ಲಿರುವ ವಿವಿಧ ದೇವಸ್ಥಾನಗಳಲ್ಲಿ ಗ್ರಾಮದ ಎಲ್ಲಾ ರಾಮಭಕ್ತರು ವಿವಿಧ ಸಂಘಟನೆ, ಸಮಾಜದ ಪ್ರಮುಖರು, ಸಾದುಸಂತರು, ಬಂದು ಸೇರಿ ರಾಮನಾಮ ಜಪ ಹಾಗೂ ಹನುಮಾನ್ ಚಾಲೀಸ್ ಪಠಣಗಳನ್ನು ಮಾಡಲಾಗುತ್ತದೆ. ಅಲ್ಲದೆ ಪ್ರಾಣಪ್ರತಿಷ್ಠೆಯ ಕಾರ್ಯಕ್ರಮವನ್ನು ಎಲ್.ಇ.ಡಿ.ಪರದೆ ಮೂಲಕ ನೇರಪ್ರಸಾರ ಮಾಡಲು ಸಿದ್ದತೆ ನಡೆಸಿದೆ. ಮಧ್ಯಾಹ್ನ ಅನ್ನಪ್ರಸಾದ ವಿತರಣೆ ಕೂಡ ನಡೆಯಲಿದೆ. ಸಂಜೆ ಸೂರ್ಯಾಸ್ತದ ಸಮಯದಲ್ಲಿ ಪ್ರತಿ ಮನೆಯಲ್ಲಿ ಐದು ದೀಪಗಳನ್ನು ಉರಿಸಿ, ಉತ್ತರಾಭಿಮುಖವಾಗಿ ಆರತಿ ಮಾಡಬೇಕು ಎಂದು ವಿನಂತಿ ಮಾಡಿಕೊಳ್ಳಲಾಗಿದೆ ಎಂದÀರು.
35ಕಡೆಗಳಲ್ಲಿ ಪ್ರಮುಖವಾಗಿ ಏಕಕಾಲದಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು, ಚಂಡಿಕಾಪರಮೇಶ್ವರಿ, ಪರಂಗಿಪೇಟೆ ಅಂಜನೇಯ ದೇವಸ್ಥಾನ, ಪೊಳಲಿ ರಾಮಕೃಷ್ಣ ತಪೋವನ ಸೇರಿದಂತೆ ಅನೇಕ ಕಡೆಗಳಲ್ಲಿ 4000ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.
ಸಮಾಜದ ಬೇರೆ ಬೇರೆ ಸಂಘಟನೆಗಳು ಮತಪಂಥಗಳನ್ನು ಕಳಚಿ ಪುಣ್ಯ ಕಾರ್ಯಕ್ರಮದ ಜೊತೆ ಸೇರಲಿದ್ದಾರೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರಮೋದಿಯವರು ಕರೆ ನೀಡಿದಂತೆ ಎಲ್ಲಾ ದೇವಸ್ಥಾನಗಳ ಸ್ವಚ್ಚತಾ ಕಾರ್ಯಗಳನ್ನು ಬಿಜೆಪಿ ವತಿಯಿಂದ ಮಾಡಲಾಗಿದೆ ಬಂಟ್ವಾಳ ಬಿಜೆಪಿ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಹರೀಶ್ ಅಮ್ಟಾಡಿ, ಪ್ರತೀಕ್ ಬಂಟ್ವಾಳ ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು