ಬಂಟ್ವಾಳ ಶ್ರೀಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನ ಟ್ರಸ್ಟ್ (ರಿ.) ಪೋಲೀಸ್ ಲೇನ್ ನ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್
ಬಂಟ್ವಾಳ: ಫೆ.16 ರಿಂದ ಫೆ. 23 ರವರೆಗೆ ನಡೆಯಲಿರುವ ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನ ಟ್ರಸ್ಟ್ (ರಿ.) ಪೋಲೀಸ್ ಲೇನ್ ಇದರ ಶ್ರೀ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರಾ ಮಹೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಬಿಡುಗಡೆಗೊಳಿಸಿದರು.
ಬಳಿಕ ಮಾತನಾಡಿದ ಅವರು, ದೇವಸ್ಥಾನದ ಕೆಲಸ ಕಾರ್ಯಗಳು ಉತ್ತಮ ರೀತಿಯಲ್ಲಿ ನಡೆದಿದ್ದು, ಮೂರು ಕೋಟಿಗಳಿಗೂ ಮಿಕ್ಕಿ ಜೀರ್ಣೋದ್ಧಾರ ಕಾರ್ಯಕ್ಕೆ ವಿನಿಯೋಗಿಲಾಗಿದ್ದು, ಸರ್ವರ ಸಹಕಾರದಿಂದ ನಡೆದಿದೆ ಎಂದು ತಿಳಿಸಿದರು.
ಪೊಲೀಸ್ ಇಲಾಖೆಯ ಪರಿಧಿಯಲ್ಲಿ ಅನ್ನಪೂರ್ಣೇಶ್ವರಿ ದೇವಿ ಸಾನಿಧ್ಯ ರಾಜ್ಯದ ಬೇರೆ ಎಲ್ಲಿಯೂ ಕಾಣಸಿಗಲು ಸಾಧ್ಯವಿಲ್ಲ. ಈ ಮಣ್ಣಿನಲ್ಲಿ ನಾಗನಡೆ ಇದೆ ಎಂಬುದನ್ನು ಬೇರೆ ಬೇರೆ ವಿಚಾರದಲ್ಲಿ ಬೆಳಕಿಗೆ ಬಂದ ಬಗ್ಗೆ ಎಲ್ಲರೂ ತಿಳಿದಿರುವ ಸತ್ಯ ಸಂಗತಿಯಾಗಿದೆ. ಮುಂದಿನ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲು ಭಕ್ತರ ಸಹಕಾರ ಬೇಕು ಎಂದು ವಿನಂತಿಸಿಕೊAಡರು.
ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಬಂಟ್ವಾಳ ಡಿ.ವೈ.ಎಸ್.ಪಿ.ವಿಜಯಪ್ರಸಾದ್, ವ್ಯವಸ್ಥಾಪನ ಸಮಿತಿ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ, ಚಂಡಿಕಾಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ, ರಕ್ತೇಶ್ವರಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವಿಶ್ವನಾಥ ಪೂಜಾರಿ, ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್ ಮಾದಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.