Monday, January 20, 2025
ದಕ್ಷಿಣ ಕನ್ನಡಬಂಟ್ವಾಳ

ಅಯೋಧ್ಯೆಯಲ್ಲಿ ಶ್ರೀರಾಮಚಂದ್ರ ದೇವರ ಪ್ರಾಣ ಪ್ರತಿಷ್ಠೆ ಪ್ರಯುಕ್ತ ನೀರುಮಾರ್ಗ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ವತಿಯಿಂದ ನಡೆದ ಭಜನಾ ಸಂಕೀರ್ತನೆ – ಕಹಳೆ ನ್ಯೂಸ್

ಅಯೋಧ್ಯೆಯಲ್ಲಿ ಶ್ರೀರಾಮಚಂದ್ರ ದೇವರ ಪ್ರಾಣ ಪ್ರತಿಷ್ಠೆ ಹಾಗೂ ಶ್ರೀ ರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದ ಸಲುವಾಗಿ ನೀರುಮಾರ್ಗ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ವತಿಯಿಂದ ಭಜನಾ ಸಂಕೀರ್ತನೆ, ಪೂಜೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಭಜನೆ ಪ್ರಾರಂಭವಾಗಿ, ಮಧ್ಯಾಹ್ನ ಶ್ರೀದೇವರಿಗೆ ಮಹಾಪೂಜೆ ನಡೆಯಿತು. ನೀರುಮಾರ್ಗ ಸಮೀಪದ ಸಂಘ ಸಂಸ್ಥೆಗಳು, ಊರವರ ಸಹಕಾರದೊಂದಿಗೆ ಬಹು ವಿಜೃಂಭಣೆಯಿಂದ ನಡೆಯಿತು. ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಯನ್ನು ಲೈವ್ ನೋಡಲು ಎಲ್.ಇ.ಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿತ್ತು. ಪೂಜೆ ನಂತರ ಅನ್ನ ಸಂತರ್ಪಣೆ ನಡೆಯಿತು.