Sunday, January 19, 2025
ಸುದ್ದಿ

ನಿರ್ದೇಶಕ ಪ್ರೇಮ್ ಗೆ ಸರಿಯಾದ ಪಾತ್ರ ನೀಡಿಲ್ಲ: ಶಿವಣ್ಣ ಅಭಿಮಾನಿಗಳ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು: ದಿ ವಿಲನ್’ ಸಿನಿಮಾ ನಿನ್ನೆ ಅದ್ದೂರಿಯಾಗಿ ಬಿಡುಗಡೆಯಾಗಿರೋದು ಎಲ್ಲರಿಗೂ ಗೊತ್ತಿರೋ ವಿಚಾರ. ಆದರೆ, ಈ ಸಿನಿಮಾ ಈಗ ಹೊಸ ವಿವಾದಕ್ಕೆ ಕಾರಣವಾಗಿದೆ.

ಶಿವರಾಜ್ ಕುಮಾರ್ ಅಬಿಮಾನಿಗಳು ಸಿನಿಮಾದ ಮೇಲೆ ಮುನಿಸಿಕೊಂಡಿದ್ದಾರೆ. ಚಿತ್ರ ನೋಡಿ ಬಂದವರ ಪೈಕಿ ಅನೇಕರು ಸಿನಿಮಾ ನಿರೀಕ್ಷೆಯ ಮಟ್ಟಕ್ಕೆ ಇಲ್ಲ ಎಂದು ಹೇಳುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮತ್ತೊಂದು ಕಡೆ ಶಿವರಾಜ್ ಕುಮಾರ್ ಅವರ ಪಾತ್ರ ಅವರ ಅಪ್ಪಟ ಅಭಿಮಾನಿಗಳಿಗೆ ತೃಪ್ತಿ ನೀಡಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಶಿವಣ್ಣ ಅಭಿಮಾನಿಗಳು ವಾರ್ ಶುರು ಮಾಡಿದ್ದಾರೆ. ಶಿವರಾಜ್ ಕುಮಾರ್ ನಿರ್ದೇಶಕ ಪ್ರೇಮ್ ಅವರಿಗೆ ಸರಿಯಾದ ಪಾತ್ರ ನೀಡಿಲ್ಲ ಎಂದು ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು