ಹಿಂದೂ ಕಾರ್ಯಕರ್ತ ದಿನೇಶ್ ಪಂಜಿಗ ವಿರುದ್ಧ ಗಡಿಪಾರು ಆದೇಶ : ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ –ಕಹಳೆ ನ್ಯೂಸ್
ಪುತ್ತೂರು : ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಪಂಜಿಗ ನಿವಾಸಿ ದಿನೇಶ್ ಪಂಜಿಗ ವಿರುದ್ಧ ಎರಡನೇ ಬಾರಿಗೆ ಗಡಿಪಾರು ನೋಟಿಸು ನೀಡಲಾಗಿದ್ದು, ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಶಾಂತಿಗೋಡು ಗ್ರಾಮದ ಪಂಜಿಗ ದಿ.ಲೋಕಪ್ಪ ಗೌಡ ಅವರ ಪುತ್ರ, ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ(32) ಇವರನ್ನ ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿಗೋಡಿನಿಂದ ವಿಜಯಪುರ ಜಿಲ್ಲೆಯ ಸಿಂದಗಿ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ನೋಟಿಸ್ ನೀಡಲಾಗಿತ್ತು.
ಪುತ್ತೂರು ಸಹಾಯಕ ಆಯುಕ್ತರ ಕಚೇರಿಯ ನ್ಯಾಯಾಲಯದಲ್ಲಿ ಜನವರಿ 24ರಂದು ಪೂರ್ವಾಹ್ನ :11.00 ಘಂಟೆಗೆ ವಿಚಾರಣೆಗೆ ಹಾಜರಾಗಿ ಗಡಿಪಾರು ವಿಚಾರಕ್ಕೆ ಕುರಿತಂತೆ ವಾದವನ್ನ ಮಂಡಿಸಲು ಸಮಯ ನಿಗದಿ ಮಾಡಲಾಗಿದೆ.
ಈ ಪ್ರಕರಣದಲ್ಲಿ ನೀವು ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ನಿಮಗೆ ತಿಳಿಸಲಾಗಿದೆ. ತಪ್ಪಿದ್ದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನೋಟೀಸ್‍ನಲ್ಲಿ ತಿಳಿಸಲಾಗಿದೆ.