Recent Posts

Monday, January 20, 2025
ಉಡುಪಿಸುದ್ದಿ

ಜ.27ರಂದು ಅಲೆವೂರು ಸುಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ 43ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ – ಕಹಳೆ ನ್ಯೂಸ್

ಉಡುಪಿ : ಜ.27ರಂದು ಅಲೆವೂರು ಯುವಕ ಸಂಘ (ರಿ.) ಹಾಗೂ ಅಲೆವೂರು ಮಹಿಳಾ ಸಂಘ ಇದರ ವತಿಯಿಂದ ಅಲೆವೂರು ಸುಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯ ದಿ| ಎಂ. ಅಚ್ಚಣ್ಣ ಶೆಟ್ಟಿ ಸ್ಮಾರಕ ರಂಗ ಮಂಟಪದಲ್ಲಿ 43ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.

ಬೆಳಗ್ಗೆ ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯತೀಶ್ ಕುಮಾರ್ ಧ್ವಜಾರೋಹಣ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಬಳಿಕ 9 ಗಂಟೆಯಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭವಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

11.00ಗಂಟೆಗೆ ಮಹಾಪೂಜೆ ನಡೆಯಲಿದ್ದು, ತದನಂತರ ಸುಬೋಧಿನಿ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕ ಡಾ. ಎಂ ರವಿರಾಜ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.

ಇನ್ನು ಕಾರ್ಯಕ್ರಮದಲ್ಲಿ ಪಡುಅಲೆವೂರು ಸ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಲಕ್ಷ್ಮೀರಮಣ ಉಪಾಧ್ಯಾಯ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಅಲೆವೂರು ಗುಡ್ಡೆಯಂಗಡಿಯ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಲ್ಲೇಶ್ ಶೆಟ್ಟಿ, ಅಲೆವೂರು ಯುವಕ ಸಂಘ (ರಿ.) ಹಾಗೂ ಅಲೆವೂರು ಮಹಿಳಾ ಸಂಘದ ಅಧ್ಯಕ್ಷರು ಮತ್ತು ಸರ್ವಸದಸ್ಯರು ಹಾಗೂ ಮತ್ತಿತ್ತರರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನೇರವೇರಲಿದೆ.