Recent Posts

Monday, April 14, 2025
ಸುದ್ದಿ

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ರೋಗಪತ್ತೆ ಪರೀಕ್ಷೆ ಸೌಲಭ್ಯ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ವಿವಿಧ 58 ಬಗೆಯ “ರೋಗಪತ್ತೆ ಪರೀಕ್ಷೆ ಸೌಲಭ್ಯ’ ಉಚಿತವಾಗಿ ಲಭ್ಯವಾಗುತ್ತಿವೆ. ಈ ಹಿಂದೆ ಕೇವಲ ಬಿಪಿಎಲ್ ಕುಟುಂಬಗಳಿಗೆ ಮಾತ್ರ ಸೀಮಿತವಾಗಿದ್ದ ಈ ಸೌಲಭ್ಯವನ್ನು ರಾಷ್ಟ್ರೀಯ ಆರೋಗ್ಯ ಮಿಷನ್‌ನ ಅಡಿಯಲ್ಲಿ ಎಲ್ಲಾ ವರ್ಗದ ಜನರಿಗೂ ವಿಸ್ತರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಕೆಲವು ಪರೀಕ್ಷೆಗಳಿಗೆ ಶೇ.50ರಷ್ಟು ಶುಲ್ಕ ಪಾವತಿಸಬೇಕಿತ್ತು. ಪ್ರಸ್ತುತ ಅದರ ವ್ಯಾಪ್ತಿಯನ್ನು 2018 -19 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯ “ಉಚಿತ ರೋಗಪತ್ತೆ ಪರೀಕ್ಷೆಗಳು” ಎಂಬ ಕಾರ್ಯಕ್ರಮದಡಿ ಎಲ್ಲಾ ವರ್ಗದ ಜನರಿಗೂ ಸಂಪೂರ್ಣ ಉಚಿತ ರೋಗ ಪತ್ತೆ ಪರೀಕ್ಷೆ ಸೇವೆ ನೀಡುವಂತೆ ವಿಸ್ತರಣೆ ಮಾಡಿ ರಾಜ್ಯ ಆರೋಗ್ಯ ಇಲಾಖೆಯು ಆದೇಶ ಹೊರಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ