Monday, January 20, 2025
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಮೂಡಬಿದ್ರೆ ಎಸ್ ಎನ್ ಎಂ ಪಾಲಿಟೆಕ್ನಿಕ್ : ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಕಾರ್ಯಗಾರ – ಕಹಳೆ ನ್ಯೂಸ್

ಎಸ್ ಎನ್ ಎಂ ಪಾಲಿಟೆಕ್ನಿಕ್ ಮೂಡುಬಿದಿರೆಯ ಎನ್ ಎಸ್ ಎಸ್ ಘಟಕ ಮತ್ತು ಯುನೈಟೆಡ್ ವೇ ಮುಂಬೈ ಎಂಬ ಎನ್‌ಜಿಒ ಜಂಟಿಯಾಗಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕುರಿತು ಕಾರ್ಯಾಗಾರವನ್ನು ಜನವರಿ 24, 2024 ರಂದು ಆಯೋಜಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಎಸ್‌ಎನ್‌ಎಂ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರಾದ ಜೆ.ಜೆ.ಪಿಂಟೋ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುನೈಟೆಡ್ ವೇ ಮುಂಬೈನ ಆಂಡ್ರ‍್ಯೂ ಡೈಸ್ ಮತ್ತು ಸಂದೀಪ್ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು . ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ರಾಮಪ್ರಸಾದ್ ಎಂ ಮತ್ತು ಗೋಪಾಲಕೃಷ್ಣ ಕೆ ಎಸ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತ್ವಿಕ ಅತಿಥಿಗಳನ್ನು ಸ್ವಾಗತಿಸಿ, ಶಿಬಾನಿ ವಂದಿಸಿದರು. ಚಿತ್ರಶ್ರೀ ಯುನೈಟೆಡ್ ವೇ ಮುಂಬೈನ ಕಾರ್ಯಗಳ ಬಗ್ಗೆ ತಿಳಿಸಿದರು. ರಮ್ಯಾ ಮತ್ತು ಪೂರ್ಣಿಮಾ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು, ಸಂಪೂರ್ಣ ಕಾರ್ಯಾಗಾರವನ್ನು ಮೂರು ಅವಧಿಗಳಾಗಿ ವಿಂಗಡಿಸಲಾಗಿದೆ, ಸುಮಾರು 185 ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು. ಈ ಕಾರ್ಯಕ್ರಮವನ್ನು ದಿವ್ಯಾ ನಿರೂಪಿಸಿದರು. ಯುನೈಟೆಡ್ ವೇ ಮುಂಬೈ ಎನ್‌ಜಿಒ ಮೂಲಕ ಭಾಗವಹಿಸಿದ ಎಲ್ಲರಿಗೂ ಪ್ರಮಾಣಪತ್ರಗಳನ್ನು ನೀಡಲಾಯಿತು.