Sunday, January 19, 2025
ಉಡುಪಿಸುದ್ದಿ

ಇನ್ನಂಜೆ ಯುವಕ ಮಂಡಲದ ಸುವರ್ಣ ಸಭಾಭವನ ಉದ್ಘಾಟನಾ ಸಮಾರಂಭ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಇನ್ನಂಜೆ ಯುವಕ ಮಂಡಲ (ರಿ.), ಇನ್ನಂಜೆ ಇದರ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಇನ್ನಂಜೆಯಲ್ಲಿ ನಿರ್ಮಾಣವಾದ ಸುವರ್ಣ ಸಭಾಭವನದ ಉದ್ಘಾಟನಾ ಸಮಾರಂಭದಲ್ಲಿ ಇಂದು ದಿನಾಂಕ 24-01-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನಂಜೆ ಸುವರ್ಣ ಸಭಾಭವನದ ಉದ್ಘಾಟನೆಯನ್ನು ನೆರವೇರಿಸಿದ ಸೋದೆ ವಾದಿರಾಜ ಮಠದ ಶ್ರೀ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಆಶೀರ್ವಚಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಇನ್ನಂಜೆ ಯುವಕ ಮಂಡಲ (ರಿ.) ಅಧ್ಯಕ್ಷರಾದ ದಿವೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಉದ್ಯಮಿಗಳಾದ ರತ್ನಾಕರ ಶೆಟ್ಟಿ, ಎಸ್.ವಿ.ಎಸ್ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಗಳಾದ ರತ್ನ ಕುಮಾರ್, ಇನ್ನಂಜೆ ಯುವಕ ಮಂಡಲ (ರಿ.) ಗೌರವ ಸಲಹೆಗಾರರಾದ ನವೀನ್ ಅಮೀನ್ ಶಂಕರಪುರ, ಕಾರ್ಯದರ್ಶಿಗಳಾದ ಹರೀಶ್ ಪೂಜಾರಿ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.