Sunday, January 19, 2025
ಉಡುಪಿಸುದ್ದಿ

ಕಾಪು ಪುರಸಭಾ ವ್ಯಾಪ್ತಿಯ ಸಾರ್ವಜನಿಕ ಶೌಚಾಲಯ ನಿರ್ಮಾಣ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ-ಕಹಳೆ ನ್ಯೂಸ್

ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಹಳೆ ಪುರಸಭಾ ಕಟ್ಟಡ ಬಳಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ರೂ. 21 ಲಕ್ಷ ಹಾಗೂ ಕಾಪು ಪೇಟೆ ಮಾರುಕಟ್ಟೆ ಬಳಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಸ್ವಚ್ಛ ಭಾರತ್ ಮಿಷನ್ ಹಾಗೂ ಎಂ.ಆರ್.ಪಿ.ಎಲ್ ಸಿ.ಎಸ್.ಆರ್ ನಿಧಿಯಿಂದ ರೂ. 20 ಲಕ್ಷ ಅನುದಾನ ಮಂಜೂರಾಗಿದ್ದು, ಇಂದು ದಿನಾಂಕ 25-01-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕಾಪು ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಸರಿತಾ ಪೂಜಾರಿ, ಪುರಸಭೆಯ ಮುಖ್ಯಾಧಿಕಾರಿಗಳಾದ ಸಂತೋಷ್, ಅಭಿಯಂತರರಾದ ಅಶ್ವಿನಿ, ನಯಾರ ಹಾಗೂ ಪ್ರಮುಖರು ಸ್ಥಳೀಯರು ಉಪಸ್ಥಿತರಿದ್ದರು.