Sunday, November 24, 2024
ಉಡುಪಿಸುದ್ದಿ

ಮುದರಂಗಡಿ ಗ್ರಾಮ ಪಂಚಾಯತ್ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ನ. 15 ರಿಂದ ಜ. 26ರವರೆಗೆ ನಡೆಯುತ್ತಿರುವ “ವಿಕಸಿತ ಭಾರತ ಸಂಕಲ್ಪ ಯಾತ್ರೆ”ಗೆ ಮುದರಂಗಡಿ ಗ್ರಾಮ ಪಂಚಾಯತ್ ಬಳಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು, ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು, ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಮಿತ, ಉಪಾಧ್ಯಕ್ಷರಾದ ಮೋಹಿನಿ ಸಿ ಹೆಗ್ಡೆ, ವಿಕಸಿತ ಭಾರತ ಸಂಕಲ್ಪ ಯಾತ್ರೆಯ ನೋಡಲ್ ಅಧಿಕಾರಿಗಳಾದ ಶೇಖರ್ ನಾಯಕ್, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಡಾ. ಧನಂಜಯ್, ಅಂಚೆ ಇಲಾಖೆಯ ಜೀವನ್, ಕೃಷಿ ಇಲಾಖೆಯ ವೆಂಕಟೇಶ್, ರುಡ್ ಸೆಟ್ ಸಂಸ್ಥೆಯ ಕರುಣಾಕರ್, ಜಿಲ್ಲಾ ಆಸ್ಪತ್ರೆಯ ಆರೋಗ್ಯ ಮಿತ್ರ ಹರೀಶ್, ಮುದರಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮುತ್ತು, ಗ್ರಾಮ ಆಡಳಿತಾಧಿಕಾರಿಗಳಾದ ಅರುಣ್ ಕುಮಾರ್ ಹಾಗೂ ಮುದರಂಗಡಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು