Recent Posts

Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ : ಬೈಕ್ ಸ್ಕಿಡ್ ಆಗಿ ಸವಾರ ಗಂಭೀರ – ಕಹಳೆ ನ್ಯೂಸ್

ಬಂಟ್ವಾಳ: ಸ್ಕಿಡ್ ಆಗಿ ಬೈಕ್ ಸವಾರನೋರ್ವ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜ.25 ರಂದು ರಾತ್ರಿ ಸುಮಾರು 10 ಗಂಟೆಗೆ ವೇಳೆಗೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ.

ಬೈಕ್ ಸವಾರ ದಿಲೀಪ್ ಪುತ್ತೂರು ಎಂದು ಗುರುತಿಸಲಾಗಿದ್ದು, ಮಂಗಳೂರು ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿರುವ ಸಂದರ್ಭದಲ್ಲಿ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಅಪಘಾತ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಂಕ್ರೀಟ್ ರಸ್ತೆಯಲ್ಲಿ ರಾಶಿ ಬಿದ್ದಿರುವ ಮರಳು ಅಪಘಾತಕ್ಕೆ ಕಾರಣವೆನ್ನಲಾಗಿದೆ. ಅಸಮರ್ಪಕ ರೀತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದೆ ಅಪಘಾತಕ್ಕೆ ಕಾರಣವೆನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕುದ್ರೆಬೆಟ್ಟು ಎಂಬಲ್ಲಿ ರಸ್ತೆಯ ಡಿವೈಡರ್ ಪ್ರವೇಶ ಮಾಡುವ ಜಾಗದಲ್ಲಿ ಸೂಚನಫಲಕಗಳಿಲ್ಲ ಮತ್ತು ಕಾಂಕ್ರೀಟ್ ಕಾಮಗಾರಿ ಮುಗಿದ ಭಾಗದ ರಸ್ತೆಯ ಮೇಲೆ ಮರಳು ತುಂಬಿಕೊಂಡಿರುವುದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿದ್ದಾರೆ.