ವಿವೇಕಾನಂದ ಮಹಾವಿದ್ಯಾಲಯದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ ಭಾರತ ವಿಶ್ವಗುರು ಪಟ್ಟಕ್ಕೇರಿಸಲು ಶ್ರಮ ವಹಿಸೋಣ : ಡಾ ಸಚಿನ್ ಶಂಕರ್ ಪಿ
ಪುತ್ತೂರು, : ಭಾರತದ ಪವಿತ್ರ ಸಂವಿಧಾನ ಅಧಿಕೃತವಾಗಿ ಜಾರಿಗೊಂಡು ಇಂದಿಗೆ 75 ವರ್ಷ. ಇದರ ಮೂಲ ಧ್ಯೇಯವಾದ ಸಮಾನತೆ, ಸ್ವಾತಂತ್ರ್ಯ, ಸಂಸ್ಕೃತಿ ಇವೆಲ್ಲದರ ರಕ್ಷಣೆಯ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಾವೆಲ್ಲರೂ ಬಲಿಷ್ಠ ಭಾರತದ ನಿರ್ಮಾಣಕ್ಕೆ ಆಣಿಯಾಗಬೇಕು. ಹಾಗಾದಲ್ಲಿ ಮಾತ್ರ ಶೀಘ್ರದಲ್ಲೇ ಭಾರತವನ್ನು ವಿಶ್ವಗುರು ಪಟ್ಟಕ್ಕೇರಿಸುವುದು ಸಾಧ್ಯವಾಗುತ್ತದೆ ಎಂದು ಎಲುಬು ಮತ್ತು ಕೀಳು ತಜ್ಞ ಡಾ ಸಚಿನ್ ಶಂಕರ್ ಪಿ ಹೇಳಿದರು.
ಅವರು ವಿವೇಕಾನಂದ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ವಿವೇಕಾನಂದ ಫಾರ್ಮಸಿ ಕಾಲೇಜು, ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಪದವಿ ಪೂರ್ವ ಕಾಲೇಜು ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್ಇ) ಪುತ್ತೂರು. ಇದರ ಸಹಭಾಗಿತ್ವದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಶುಭ ಸಂದೇಶವನ್ನು ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಮಾತನಾಡಿ ಭಾರತವನ್ನು ಆಳಿದ ಪರಕೀಯರಿಂದಾಗಿ ಉಂಟಾದ ಪ್ರಾಂತ್ಯಗಳ ನಡುವಣ ಸಮಸ್ಯೆ ಮತ್ತು ಇತರ ಸಮಸ್ಯೆಗಳನ್ನು ನೀಗಿಸಿ, ದೇಶವನ್ನು ಅಭಿವೃದ್ಧಿಯತ್ತ ಸಾಗುವಂತೆ ಮಾಡುವಲ್ಲಿ ಭಾರತೀಯ ಸಂವಿಧಾನ ಮಹತ್ತರ ಪಾತ್ರ ವಹಿಸಿದೆ. ರಾಷ್ಟ್ರೀಯ ಚಿಂತಕರ ಪ್ರಯತ್ನದಿಂದ ಇಂದು ಭಾರತ ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ಮತ್ತು ವೈಜ್ಞಾನಿಕವಾಗಿ ಪ್ರಗತಿ ಸಾಧಿಸಿದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿ,ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಪದವಿಪೂರ್ವ ಕಾಲೇಜು ಮತ್ತು ಸಿಬಿಎಸ್ಇ ಶಾಲೆಯ ಆಡಳಿತ ಮಂಡಳಿಯ ಎಲ್ಲಾ ಪದಾಧಿಕಾರಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು , ಎನ್ ಎಸ್ ಎಸ್ , ಎನ್ ಸಿ ಸಿ , ರೋವರ್ಸ್ ಮತ್ತು ರೇಂಜರ್ಸ್ ಹಾಗೂ ರೆಡ್ ಕ್ರಾಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ಎಸ್ ಕಾರ್ಯಕ್ರಮವನ್ನು ನಿರ್ವಹಿಸಿದರು.