Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ನಾಳೆ (ಜ.27) ಬೆಂಗಳೂರು ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ; ಲೋಕಸಭಾ ಚುನಾವಣೆ ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ..!? , ಅರುಣ್ ಕುಮಾರ್ ಪುತ್ತಿಲ ಪಕ್ಷ ಸೇರ್ಪಡೆ ಕುರಿತು ನಿರ್ಣಯ..!! – ಕಹಳೆ ನ್ಯೂಸ್

ಬೆಂಗಳೂರು,ಜ 26 : ನಾಳೆ (ಜ.27) ರಂದು ನಡೆಯುವ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿಯಲ್ಲಿ 900ಕ್ಕೂ ಹೆಚ್ಚು ಆಹ್ವಾನಿತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

 

ಜಾಹೀರಾತು
ಜಾಹೀರಾತು
ಜಾಹೀರಾತು

ನಗರದ ಅರಮನೆ ಮೈದಾನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಸಭೆ ನಡೆಯಲಿದೆ. ರಾಜ್ಯದಲ್ಲಿರುವ ಬಡವರು, ರೈತರು ಮತ್ತು ದಲಿತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟಗಳನ್ನು ಕೈಗೆತ್ತಿಕೊಳ್ಳಬೇಕು. ಬಡವರ ವಿರೋಧಿ ಸರಕಾರದ ಬಗ್ಗೆ ಜನರಿಗೆ ಸತ್ಯಾಂಶಗಳನ್ನು ತಲುಪಿಸಬೇಕು ಎಂದು ಯೋಜಿಸಿದ್ದೇವೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಸರಕಾರದ ಕಾರ್ಯಕ್ರಮಗಳಿಂದ ದೇಶಾದ್ಯಂತ ಜನತೆ ಮೋದಿಜೀ ಪರವಾಗಿದ್ದಾರೆ. ಕೇಂದ್ರದ ಯೋಜನೆಗಳನ್ನು ಮನೆಮನೆಗೆ ತಲುಪಿಸಲು ಉದ್ದೇಶಿಸಲಾಗಿದೆ. ಮೋದಿಜೀ ಅವರ ಜನಪ್ರಿಯತೆಯನ್ನು ಮತವನ್ನಾಗಿ ಪರಿವರ್ತಿಸಿ ಕರ್ನಾಟಕವು ದಕ್ಷಿಣ ಭಾರತದ ಬಿಜೆಪಿ ಹೆಬ್ಬಾಗಿಲು ಎಂದು ಸಾಬೀತು ಪಡಿಸುತ್ತೇವೆ ಎಂದು ತಿಳಿಸಿದರು.

ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತೇವೆ. ಎಲ್ಲ ವಿಷಯಗಳ ಸಮಾಲೋಚನೆ ಮಾಡಿ, ಮುಂದಿನ ಲೋಕಸಭಾ ಚುನಾವಣೆಗೆ ಬೇಕಾದ ಕಾರ್ಯತಂತ್ರವನ್ನು, ಕಾರ್ಯಕ್ರಮಗಳನ್ನು ರೂಪಿಸುತ್ತೇವೆ ಎಂದು ಪ್ರಕಟಿಸಿದರು.

ಕೇಂದ್ರ ಸಚಿವ ಭೂಪೇಂದ್ರ ಯಾದವ್‍ಜೀ ಅವರು ನಾಳೆ ಕಾರ್ಯಕಾರಿಣಿ ಉದ್ಘಾಟಿಸುತ್ತಾರೆ. ಪಕ್ಷದ ಎಲ್ಲ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳು ವೇದಿಕೆ ಮೇಲೆ ಇರುತ್ತಾರೆ. ಅವರ ಮಾರ್ಗದರ್ಶನದಲ್ಲಿ ಪಕ್ಷ ಮುನ್ನಡೆಸುವ ಕುರಿತು ಚರ್ಚಿಸುತ್ತೇವೆ ಎಂದು ತಿಳಿಸಿದರು.

ಮೋದಿಜೀ ಅವರ ನಾಯಕತ್ವ ಮತ್ತು ಬಿಜೆಪಿ ತತ್ವ, ಸಿದ್ಧಾಂತ ಒಪ್ಪಿ ಬರುವ ಯಾವುದೇ ನಾಯಕರನ್ನು ಪಕ್ಷಕ್ಕೆ ಸ್ವಾಗತ ಮಾಡುತ್ತೇವೆ ಎಂದರು.

ಜಗದೀಶ್ ಶೆಟ್ಟರ್ ಅವರ ಮನಸ್ಸು ಬಿಜೆಪಿಯಲ್ಲೇ ಇತ್ತು. ಮೋದಿಜೀ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಅಪೇಕ್ಷೆಯೂ ಇತ್ತು. ಅಪೇಕ್ಷೆಗೆ ತಕ್ಕಂತೆ ಉತ್ತಮ ನಿರ್ಧಾರ ಮಾಡಿದ್ದಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ ಎಂಬ ಕುರಿತು ಕೇಂದ್ರದ ವರಿಷ್ಠರು ನಿರ್ಧಾರ ಮಾಡುತ್ತಾರೆ.  ಪಕ್ಷದ ಕಾರ್ಯಕರ್ತರ ನಿರೀಕ್ಷೆಗೆ ಅನುಗುಣವಾಗಿ ಈ ನಿರ್ಧಾರ ಇರಲಿದೆ ಎಂದು ತಿಳಿಸಿದರು.

ಅರುಣ್ ಕುಮಾರ್ ಪುತ್ತಿಲ ಪಕ್ಷ ಸೇರ್ಪಡೆ ಕುರಿತು ನಿರ್ಣಯ..!! ತಾಲೂಕು, ಜಿಲ್ಲೆಯ ಜವಾಬ್ದಾರಿಗಳ ಬಗ್ಗೆಯೂ ಜಿಲ್ಲಾ ಶಾ ಚರ್ಚೆ..!!

ರಾಜ್ಯದಲ್ಲೇ ಸುದ್ದಿಯಲ್ಲಿರುವ ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ ಪಕ್ಷ ಸೇರ್ಪಡೆ ಕುರಿತು ನಾಳೆ ಮಹತ್ವದ ನಿರ್ಣಯವಾಗಲಿದ್ದು, ಅವರಿಗೆ ನೀಡುವ ಜವಾಬ್ದಾರಿ ಕುರಿತು ನಾಳೆಯೇ ಪ್ರಮುಖ ನಾಯಕರ ಸಭೆಯ ಬಳಿಕ ಫೈನಲ್ ಆಗಲಿದೆ. ತಾಲೂಕಿನ, ಜಿಲ್ಲೆಯ ಜವಾಬ್ದಾರಿಗಳ ಕುರಿತು ಜಿಲ್ಲಾ ಶಾ ಬೈಠಕ್ ನಡೆಯಲಿದ್ದು, ಅಲ್ಲಿನ ನಿರ್ಣಯಗಳ ಮೇಲೆ ವರಿಷ್ಠರ ನಿರ್ಧಾರ ನಿಂತಿದೆ ಎನ್ನಲಾಗುತ್ತಿದೆ.

ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ, ಪಿ.ರಾಜೀವ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಜಿಲ್ಲಾಧ್ಯಕ್ಷರಾದ ಸಪ್ತಗಿರಿ ಗೌಡ, ಕೆ.ಸಿ.ರಾಮಮೂರ್ತಿ, ಹರೀಶ್, ವಿಧಾನಪರಿಷತ್ ಸದಸ್ಯ ಗೋಪಿನಾಥ ರೆಡ್ಡಿ, ಮುಖಂಡರು, ಪ್ರಮುಖ ಕಾರ್ಯಕರ್ತರು ಇದ್ದರು.