ಖರ್ಗೆ ವಿರುದ್ಧ ಅವಹೇಳನಕಾರಿ ಪದ ಬಳಕೆ – ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್ – ಕಹಳೆ ನ್ಯೂಸ್
ಬೆಂಗಳೂರು: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ರಾಯಚೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ
ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚಕ್ರವರ್ತಿ ಸೂಲಿಬೆಲೆ, ಅಯೋಗ್ಯ ಪದವನ್ನು ಬಳಕೆ ಮಾಡಿದ್ದರು. ಇದೇ ಪ್ರಕರಣದಲ್ಲಿ ರಾಯಚೂರು ಪೊಲೀಸರು ಅವರ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದೆ ರಾಯಚೂರಿನ ಪೊಲೀಸರು ಸೂಲಿಬೆಲೆ ಅವರಿಗೆ ನೋಟಿಸ್ ನೀಡಲೆಂದು ಬೆಂಗಳೂರಿಗೆ ಬಂದಿದ್ದರು. ಬಸವೇಶ್ವರ ನಗರದಲ್ಲಿರುವ ಅವರ ನಿವಾಸಕ್ಕೆ ತೆರಳಿ ನೋಟಿಸ್ ನೀಡಬೇಕೆಂದು ಬಂದಿದ್ದರು. ಆದರೆ ಈ ಸಮಯದಲ್ಲಿ ಅವರು ಮನೆಯಲ್ಲಿ ಇರಲಿಲ್ಲ. ರಾಮಮಂದಿರ ಉದ್ಘಾನೆಯ ಹಿನ್ನಲೆ ಅವರು ಅಯೋಧ್ಯೆಗೆ ಹೋಗಿದ್ದರು. ಚಕ್ರವರ್ತಿ ಅಯೋಧ್ಯೆಯಲ್ಲಿ ಇದ್ದಿದ್ದರಿಂದ ಅವರ ಮನೆಗೆ ನೋಟಿಸ್ ನೀಡಿ ಪೊಲೀಸರು ರಾಯಚೂರಿಗೆ ವಾಪಸ್ ಆಗಿದ್ದರು. ಇದೀಗ ಅವರ ವಿರುದ್ಧ ರಾಯಚೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಚಕ್ರವರ್ತಿ ಸೂಲಿಬೆಲೆ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಲು ಮುಂದಾಗಿದ್ದಾರೆ.