Tuesday, January 21, 2025
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಬೆಳ್ತಂಗಡಿ ಗೋಳಿಯಂಗಡಿ ಬಶೀರ್ ರ ಜಮೀನಿನಲ್ಲಿನ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ; ಮೂವರು ಮೃತ್ಯು – ಕಹಳೆ ನ್ಯೂಸ್

ಬೆಳ್ತಂಗಡಿ, ಜ 28 : ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿ ಅನೇಕ ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ.


ಕೇರಳದ ಸ್ವಾಮಿ(55) , ಕೇರಳದ ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಮೃತಪಟ್ಟಿದ್ದು, ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಗಾಯಗೊಂಡವರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕುಚ್ಚೋಡಿ ಸಮೀಪದ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಸುತ್ತಿದ್ದು, ಇಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತಪಟ್ಟ ಮೂವರು ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟಕ ತಯಾರಿಸುತ್ತಿದ್ದರು. ಈ ಪೈಕಿ ಓರ್ವನ ಮೃತದೇಹ ದೊರೆತಿದ್ದು, ಇನ್ನಿಬ್ಬರ ದೇಹ ಸ್ಫೋಟದ ಸುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ಛಿದ್ರವಾಗಿ ಬಿದ್ದಿದೆ.

ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬಂದಿ ತಕ್ಷಣ ಬೆಂಕಿನಂದಿಸಿ ಅರೆ ಜೀವಾವಸ್ಥೆಯಲ್ಲಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದರೂ, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.