Wednesday, January 22, 2025
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಗೋಳಿಯಂಗಡಿ ಜಮೀನಿನಲ್ಲಿನ ಸುಡುಮದ್ದು ತಯಾರಿಕಾ ಘಟಕದಲ್ಲಿ ಭೀಕರ ಸ್ಪೋಟ : ಪರಾರಿಯಾಗಲು ಯತ್ನಿಸಿದ ಮಾಲಕ ಪೊಲೀಸರ ವಶಕ್ಕೆ..? – ಕಹಳೆ ನ್ಯೂಸ್

ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್‌ತ್ಯಾರು ಸಮೀಪ ಸುಡುಮದ್ದು ತಯಾರಿಕಾ ಘಟಕದಲ್ಲಿ ಸಂಜೆ 5 ಗಂಟೆಗೆ ಸ್ಫೋಟ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳದಲ್ಲಿದ್ದ ಕೆಲವರಿಗೆ ಗಾಯಗಳಾಗಿವೆ. ತಡರಾತ್ರಿ ತನಕ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.ಸ್ಫೋಟದ ತೀವ್ರತೆ ಗೆ ದೇಹಗಳು ಛಿದ್ರ ಛಿದ್ರವಾಗಿದ್ದು ಅಡಿಕೆ ಗಿಡದ ಬುಡದಲ್ಲಿ ದೇಹಗಳು ಪತ್ತೆಯಾಗಿವೆ. ತೋಟದ ವಿವಿಧ ಭಾಗಗಳಲ್ಲಿ ಪಾದ, ಕೈ, ಕಾಲು, ಮೆದುಳು ಬಿದ್ದಿರುವ ದೃಶ್ಯಗಳು ತೀವ್ರತೆಯನ್ನು ಸಾರಿ ಹೇಳುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆ ಸಂಬAಧಿಸಿದAತೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡದ ದೂರಿನಂತೆ ಮೇಲೆ ಮಾಲೀಕ ಬಶೀರ್ ಎಂಬಾತನ ಮೇಲೆ ಎಫ್ ಐಆರ್ ದಾಖಲಾಗಿದೆ. ಈ ಭೀಕರ ಸ್ಪೋಟ ಘಟನೆಯ ಬಳಿಕ ವೇಣೂರಿನಿಂದ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆ ಸುಳ್ಯದಲ್ಲಿ ವಶಕ್ಕೆ ಪಡೆದುಕೊಂಡು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದುರಂತಕ್ಕೆ ಕಾರಣ ತನಿಖೆ ಬಳಿಕ ತಿಳಿಯಬೇಕಷ್ಟೇ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ತಿಳಿಸಿದ್ದಾರೆ. ಸಂಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಹೇಳಿಕೆ ನೀಡಿರುವ ಅವರು, ಇಲ್ಲಿನ 50 ಸೆಂಟ್ಸ್ ಜಾಗದಲ್ಲಿ ಸಯ್ಯದ್ ಬಷೀರ್‌ಎಂಬುವವರು ಪಟಾಕಿ ಮಾಡಲು ಲೈಸೆನ್ಸ್ ಪಡೆದಿದ್ದಾರೆ. ಇದಕ್ಕೋಸ್ಕರ 2011-12 ನಲ್ಲಿ ಪಡೆದಿರುವ ಪರವಾನಗಿ 2019 ನವೀಕರಣ ಆಗಿದೆ, 2024 ಮಾರ್ಚ್ವರೆಗೂ ಪರವಾನಗಿ ಚಾಲ್ತಿಯಲ್ಲಿದೆ ಎಂದು ಮಾಹಿತಿ ನೀಡಿದರು. ಇವರು ಬೇಡಿಕೆಗೆ ತಕ್ಕ ಹಾಗೆ ಇಲ್ಲಿ ಪಟಾಕಿ ತಯಾರಿಸುತ್ತಿದ್ದರು ಅನ್ನುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಪಟಾಕಿ ಮಾಡುವಾಗ ಯಾವ ಕಾರಣಕ್ಕೆ ಸ್ಫೋಟವಾಗಿದೆ ಎಂಬುದು ಗೊತ್ತಾಗಿಲ್ಲ. ಸ್ಥಳಕ್ಕೆ ವಿಧಿವಿಜ್ಞಾನ ತಂಡ ಹಾಗೂ ಸ್ಫೋಟಕ ಪತ್ತೆ ಪರಿಣತರ ತಂಡ ಬರುತ್ತಿದೆ ಎಂದು ತಿಳಿಸಿದ್ದಾರೆ.