Sunday, January 19, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ವೇಣೂರಿನಲ್ಲಿ ಪಟಾಕಿ ಘಟಕ ಸ್ಪೋಟ : ದ.ಕ. ಜಿಲ್ಲೆಯಲ್ಲಿ ಸುಡುಮದ್ದು ತಯಾರಿಕಾ ಘಟಕಗಳ ಪರವಾನಿಗೆ ತಾತ್ಕಾಲಿಕ ಅಮಾನತು – ಕಹಳೆ ನ್ಯೂಸ್

ಮಂಗಳೂರು : ವೇಣೂರಿನಲ್ಲಿ ಪಟಾಕಿ ಘಟಕ ಸ್ಪೋಟದಿಂದ ಮೂವರ ಸಾವು ಘಟನೆ ನಡೆದ ನಂತರ ಸರ್ಕಾರ ಎಚ್ಚೆತ್ತುಕೊಂಡಿದೆ.ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿಬರ್ಂಧ ವಿಧಿಸಿ ದ.ಕ ಜಿಲ್ಲಾಧಿಕಾರಿ (ಪ್ರಭಾರ) ಡಾ.ಆನಂದ ಕೆ. ಆದೇಶ ಮಾಡಿದ್ದಾರೆ. ದ.ಕ ಜಿಲ್ಲೆಯ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ನಿಬರ್ಂಧಿಸಿ ಅಮಾನತ್ತಿನಲಿಡಲು ಆದೇಶ ಮಾಡಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶ, ಸರ್ಕಾರದ ಮಾರ್ಗಸೂಚಿ ಪಾಲನೆಯ ಮರುಪರಿಶೀಲನೆಗಾಗಿ ಪಟಾಕಿ ತಯಾರಿಕೆ, ಮಾರಾಟ ಘಟಕಗಳ ಮರುಪರಿಶೀಲನೆಗೆ ಜಿಲ್ಲಾ ಮಟ್ಟದ ತನಿಖಾ ಸಮಿತಿ ರಚನೆ ಮಾಡಿಲಾಗಿದೆ.ಮಂಗಳೂರು ಮತ್ತು ಪುತ್ತೂರು ಎಸಿಗಳ ಅಧ್ಯಕ್ಷತೆಯ ಸಮಿತಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ತಕ್ಷಣ ಸೀಲ್ ಡೌನ್ ಮಾಡಲು ಆದೇಶ ಮಾಡಲಾಗಿದೆ.ಬಳಿಕ ಸ್ಪೋಟಕ ಅಧಿನಿಯಮ ಮತ್ತು ಸರ್ಕಾರದ ಮಾರ್ಗಸೂಚಿ ಪಾಲನೆ ಬಗ್ಗೆ ಪರಿಶೀಲನೆಗೆ ಫೆ.5 ರೊಳಗೆ ಈ ಬಗ್ಗೆ ಸಮಗ್ರ ವರದಿ ಸಲ್ಲಿಸಲು ದ.ಕ ಜಿಲ್ಲಾಧಿಕಾರಿ ಆದೇಶ ಮಾಡಲಾಗಿದೆ.ಮುಂದಿನ ಆದೇಶದವರೆಗೆ ದ.ಕ ಜಿಲ್ಲೆಯ ಎಲ್ಲಾ ಸುಡುಮದ್ದು ಘಟಕಗಳು ಬಂದ್ ಗೆ ಆದೇಶ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು