Recent Posts

Friday, November 22, 2024
ಕಡಬಸುದ್ದಿಸುಬ್ರಹ್ಮಣ್ಯ

ಒಂದೇ ದಿನದಲ್ಲಿ ಕುಮಾರ ಪರ್ವತಾರೋಹಣ ಮಾಡಿದ 1,000ಕ್ಕೂ ಹೆಚ್ಚು ಟ್ರೆಕ್ಕಿಂಗ್ ಉತ್ಸಾಹಿಗಳು : ಚಾರಣಿಗರ ಹಿತದೃಷ್ಟಿಯಿಂದ ಫೆ.1ರಿಂದ ಅಕ್ಟೋಬರ್ ತನಕ ಟ್ರೆಕ್ಕಿಂಗ್ ನಿಷೇಧ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆಬ್ರವರಿ 1ರಿಂದ ನಿಷೇಧಿಸಲಾಗಿದೆ.

ಚಾರಣಿಗರ ದಂಡು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ ನೀಡುವ ಸಾಧ್ಯತೆ ಇದೆ. ಸದ್ಯ ಜಿಲ್ಲಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಫೆ.1ರಿಂದ ಅಕ್ಟೋಬರ್ ತನಕ ಅಥವಾ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇಧಿಸಲಾಗಿದೆ .

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವರ್ಷದ ಕುಮಾರಪರ್ವತ ಚಾರಣದ ಅವಧಿ ಮುಗಿದಿದೆ. ಅಲ್ಲದೆ ಪರ್ವತದ ಹುಲ್ಲುಗಾವಲು ಸಂಪೂರ್ಣ ಒಣಗಿರುವುದರಿಂದ ಮುಂದೆ ಬಿಸಿಲಿನ ಬೇಗೆಗೆ ಬೆಂಕಿ ಅನಾಹುತಗಳಾಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಆವಶ್ಯಕತೆ ಇದೆ. ಇದೀಗ ಕುಮಾರ ಪರ್ವತಕ್ಕೆ ಬರುವ ಚಾರಣಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೇಸಗೆಯ ಕಾರಣ ನೀರಿನ ಮೂಲಗಳು ಬತ್ತಿ ಹೋಗಿವೆ. ಚಾರಣಿಗರು ತಂಗುವ ಗಿರಿಗದ್ದೆಯಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಕ್ಕೆ ನೀರಿನ ವ್ಯವಸ್ಥೆ ಒದಗಿಸಲು ತೊಂದರೆಯಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಆನ್ ಲೈನ್ ಬುಕ್ಕಿಂಗ್ : ಜ.26ರಂದುಒAದೇ ದಿನದಲ್ಲಿ 1,000ಕ್ಕೂ ಹೆಚ್ಚು ಟ್ರೆಕ್ಕಿಂಗ್ ಉತ್ಸಾಹಿಗಳು ಕುಮಾರ ಪರ್ವತಾರೋಹಣ ಮಾಡಿದ್ದರು. ಇದು ಪರಿಸರವಾದಿಗಳಲ್ಲಿ ಆತಂಕವನ್ನು ಹೆಚ್ಚಿಸಿದೆ. ಈ ಹಿನ್ನಲೆಯಲ್ಲಿ ದಿನಕ್ಕೆ 600 ಮಂದಿಗಷ್ಟೇ ಚಾರಣಕ್ಕೆ ಅವಕಾಶ ನೀಡುವಂತೆ ಆನ್ ಲೈನ್ ಬುಕ್ಕಿಂಗ್ ನಡೆಸುವ ಸಾಧ್ಯತೆ ಇದೆ.