ಕಬಕ : ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಮಂಜೂರಾದ ಜಾಗವನ್ನು ಕರ್ನಾಟಕ ಕ್ರಿಕೆಟ್ ಅಸೋಸಿಯೇಶನ್ ಸಂಸ್ಥೆಗೆ ಹಸ್ತಾಂತರಿಸಿದ ಶಾಸಕ ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್
ಪುತ್ತೂರು : ಕಬಕದಲ್ಲಿ ಆರಂಭಗೊಳ್ಳಿರುವ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಪುತ್ತೂರು ಶಾಸಕರ ಪ್ರಯತ್ನದಿಂದ ಸುಮಾರು 22.5 ಎಕ್ರೆ ಜಾಗ ಮಂಜೂರಾಗಿದ್ದು, ಜಾಗವನ್ನು ಕರ್ನಾಟಕ ಕ್ರಿಕೆಟ್ ಅಸೋಸಿಯೇಶನ್ ಸಂಸ್ಥೆಗೆ ಶಾಸಕ ಅಶೋಕ್ ಕುಮಾರ್ ರೈ ಹಸ್ತಾಂತರಿಸಿದರು.
ಪುತ್ತೂರು ಸಹಾಯಕ ಕಮಿಷನರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಜಾಗ ಹಸ್ತಾಂತರಿಸಿ, ಬಳಿಕ ಮಾತನಾಡಿದ ಶಾಸಕರು ಪುತ್ತೂರಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆರಂಭಗೊಳ್ಳುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಸ್ಟೇಡಿಯ ಕಾರಣಕ್ಕೆ ಪುತ್ತೂರು ಮುಂದಿನ ದಿನಗಳಲ್ಲಿ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲಿದೆ. ಎಂದು ಹೇಳಿದರು.