ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ : ಮಂಗಳೂರಿನ ಮೆಸ್ಕಾಂ ಇಇ ಶಾಂತಕುಮಾರ್ ಮನೆಗೆ ಸರ್ಚಿಂಗ್ – ಕಹಳೆ ನ್ಯೂಸ್
ಮಂಗಳೂರು: ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಬ್ರಷ್ಟ ಅಧಿಕಾರಿಗಳ ಮನೆಗೆ ದಾಳಿ ನಡೆಸಿದ ಲೊಕಾಯುಕ್ತ ಅಧಿಕಾರಿಗಳು ಆಸ್ತಿ ವಿವರ ಪರಿಶೀಲಿಸುತ್ತಿದ್ದಾರೆ.
ಮಂಗಳೂರಿನಲ್ಲೂ ಲೋಕಾಯುಕ್ತ ದಾಳಿ ನಡೆದಿದ್ದು, ಮೆಸ್ಕಾಂ ಅಧಿಕಾರಿಯ ಮನೆಯಲ್ಲಿ ಸರ್ಚಿಂಗ್ ನಡೆಸಿದ್ದಾರೆ. ಮಂಗಳೂರಿನ ಮೆಸ್ಕಾಂ ಇಇ ಶಾಂತಕುಮಾರ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಮಂಗಳೂರಿನ ಅತ್ತಾವರ ವಿಭಾಗದ ಮೆಸ್ಕಾಂ ಇಇ ಶಾಂತಕುಮಾರ್ ಅವರ ಮಂಗಳೂರಿನ ಮನೆ, ಕಚೇರಿಯಲ್ಲಿ ಲೋಕಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಶಾಂತಕುಮಾರ್ ಅವರ ಬೆಂಗಳೂರಿನ ನಿವಾಸದ ಮೇಲೂ ದಾಳಿ ನಡೆಸಲಾಗಿದೆ.
ಕಳೆದ ಐದಾರು ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸ್ತಿರೋ ಶಾಂತಕುಮಾರ್ ಮೇಲೆ ಹಲವು ಆರೋಪ ಕೇಳಿ ಬಂದಿದ್ದು, ಆದಾಯ ಮೀರಿ ಅಸ್ತಿ ಗಳಿಕೆ ಆರೋಪದಡಿ ದಾಳಿ ಮಾಡಲಾಗಿದೆ.