Monday, January 20, 2025
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್​ ಸಂಸದ ಡಿ.ಕೆ ಸುರೇಶ್​ ಪ್ರತ್ಯೇಕ ರಾಷ್ಟ್ರ ಹೇಳಿಕೆ ಸಂಕಷ್ಟ ; ಸೆಕ್ಷನ್ 124 ಎ ಆಡಿ ನ್ಯಾಯಾಲಯದಲ್ಲಿ ದಾವೆ ಹೂಡಿದ ಬಿಜೆಪಿ ಮುಖಂಡ ವಿಕಾಸ್​ ಪುತ್ತೂರು..!!! – ಕಹಳೆ ನ್ಯೂಸ್

ದಕ್ಷಿಣ ಕನ್ನಡ, ಫೆ.02: ಕಾಂಗ್ರೆಸ್​ ಸಂಸದ ಡಿ.ಕೆ ಸುರೇಶ್(DK Suresh) ಪ್ರತ್ಯೇಕ ರಾಷ್ಟ್ರದ ಹೇಳಿಕೆ ವಿಚಾರ ರಾಷ್ಟ್ರ ಮಟ್ಟದಲ್ಲಿ ವಿವಾದಕ್ಕೀಡಾಗಿದೆ. ಕೂಡಲೇ ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದೀಗ ಈ ಹೇಳಿಕೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಿಸುವಂತೆ ಬಿಜೆಪಿ ಮುಖಂಡ ವಿಕಾಸ್.ಪಿ ಎಂಬವವರು ಮಂಗಳೂರಿನ 2ನೇ JMFC ನ್ಯಾಯಾಲಯಕ್ಕೆ ಸೆಕ್ಷನ್ 124 ಎ ಅಡಿ ಕ್ರಮ ಕೈಗೊಳ್ಳುವಂತೆ ದೂರು ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಎಫ್​ಐಆರ್ ದಾಖಲಿಸಿ ತನಿಖೆ ನಡೆಸಲು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಠಾಣಾಧಿಕಾರಿಯವರಿಗೆ ಆದೇಶಿಸುವಂತೆ ಮನವಿ ಸಲ್ಲಿಸಿದ್ದಾರೆ.

ಡಿ.ಕೆ ಸುರೇಶ್ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆಂಬ ಭರವಸೆಯಿದೆ
ಈ ಕುರಿತು ಮಾತನಾಡಿದ ಬಿಜೆಪಿ ಮುಖಂಡ ವಿಕಾಸ್.ಪಿ ‘ಡಿ.ಕೆ ಸುರೇಶ್ ದೇಶ ವಿರೋಧಿ, ದೇಶದ್ರೋಹಿ ಹೇಳಿಕೆ ನೀಡಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳಲು ಮಂಗಳೂರು ಆಯುಕ್ತರಿಗೆ ಹಾಗೂ ಉತ್ತರ ಪೊಲೀಸ್ ಠಾಣೆಗೆ ದೂರು ನೀಡಿದ್ದೆವು. ಹಾಗೇ ಮಂಗಳೂರು ನ್ಯಾಯಾಲಯದಲ್ಲೂ ವಿನಂತಿ ಮಾಡಿದ್ದೇವೆ. ಡಿ.ಕೆ ಸುರೇಶ್ ಸಂಸದರಾಗಿದ್ದರೂ ಸಹ ಭಾರತವನ್ನು ವಿಭಜಿಸಬೇಕೆಂದಿದ್ದಾರೆ. ಈ ಮೂಲಕ ಪ್ರತ್ಯೇಕವಾದಿ ಶಕ್ತಿಗಳಿಗೆ ಕುಮ್ಮಕ್ಕು ಕೊಡುವ ಮೂಲಕ ದೇಶದ ಸಂವಿಧಾನಕ್ಕೆ ಅಗೌರವ ತೋರಿಸಿದ್ದಾರೆ. ಇದರಿಂದ ಪ್ರತ್ಯೇಕವಾದಿಗಳಿಗೂ ಡಿ.ಕೆ ಸುರೇಶ್ ಅವರಿಗೂ ಯಾವುದೇ ವ್ಯತ್ಯಾಸ ಕಾಣುತ್ತಿಲ್ಲ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇನೆ :
ಭಾರತದ ನ್ಯಾಯಾಂಗ ವ್ಯವಸ್ಥೆ, ನ್ಯಾಯಾಧೀಶರ ಮೇಲೆ ಸಂಪೂರ್ಣ ನಂಬಿಕೆಯಿದೆ. ಹೀಗಾಗಿಯೇ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇನೆ. ಡಿ.ಕೆ ಸುರೇಶ್ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆಂಬ ಭರವಸೆ ಇದೆ. ಇದೇ 7ನೇ ತಾರೀಖಿಗೆ ಡೇಟ್ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವ ವಿಶ್ವಾಸವಿದೆ. ಡಿ.ಕೆ ಸುರೇಶ್ ತಮ್ಮ ಜವಾಬ್ದಾರಿ ಮರೆತು ಈ ರೀತಿ ಮಾಡಿದ್ದಾರೆ. ಕಾಂಗ್ರೆಸ್ ಈ ಹಿಂದೆ ಭಾರತವನ್ನು ತುಂಡು ಮಾಡಿದ್ದನ್ನು ಮುಂದುವರಿಸುವ ಗುತ್ತಿಗೆಯನ್ನು ಸುರೇಶ್ ತೆಗೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.

ಜಾಹೀರಾತು
ಜಾಹೀರಾತು
ಜಾಹೀರಾತು