Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ.)ನ 7ನೇ ವರ್ಷದ ವಾರ್ಷಿಕೋತ್ಸವ, ಹಾಗೂ ಪದಗ್ರಹಣ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ.) ಇದರ 7ನೇ ವರ್ಷದ ವಾರ್ಷಿಕೋತ್ಸವ, ಹಾಗೂ ಪದಗ್ರಹಣ ಕಾರ್ಯಕ್ರಮ ಫೆ.11ರಂದು ಪೆರ್ಲಾಪು ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಲಿದೆ.

ಶ್ರೀ ನಾರಾಯಣ ಗುರುವರ್ಯರ ಗುರುಪೂಜಾ ಕಾರ್ಯಕ್ರಮ ನಡಯಲಿದ್ದು, ಬಳಿಕ ಸಂಘದ ಗೌರವಧ್ಯಕ್ಷರಾದ ಮೋಹನ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿವೃತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ ಪ್ರದಾನ ಭಾಷಣ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಕಡೇಶಿವಾಲಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್, ಉದ್ಯಾವರ ಮಲ್ಪೆ ಯ ಶಿವಸಾಗರ್ ಹೋಟೆಲ್ ಮಾಲಕರಾದ ಪ್ರಭಾಕರ್ ಪೂಜಾರಿ, ಮಂಗಳೂರು ಆತ್ಮಶಕ್ತಿ ವಿವಿದೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೌಮ್ಯ ವಿಜಯ, ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಬಾಬು ಕೆ ವಿ, ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವಾಧ್ಯಕ್ಷರಾದ ಜಯಂತ್ ನಡುಬೈಲ್, ಯಕ್ಷಗಾನ ಹಾಸ್ಯ ಕಲಾವಿದ ನಾರಾಯಣ ಉಜಿರೆ, ಇವರನ್ನು ಸನ್ಮಾನಿಸಲಿದ್ದು, ಕೃಷಿ ಕ್ಷೇತ್ರ ದಲ್ಲಿ ಸಾಧನೆಗೈದ ಗೌರಿ ಕೆ ಬಂಗೇರ ಬಡಕಬೈಲ್, ನಾಟಿ ಮದ್ದು ಕ್ಷೇತ್ರದಲ್ಲಿ ಪೂವಕ್ಕ ಕಡೆಕೋಳಿಮಜಲ್, ಕುಲಕಸುಬು ಮೂರ್ತೆ ಗಾರಿಕೆ ಕ್ಷೆತ್ರದಲ್ಲಿ ವಾಸು ಪೂಜಾರಿ ನೆತ್ತರ, ವಿದ್ಯಾರ್ಥಿ ಕುಮಾರಿ ಸಾನ್ವಿ ಇವರಿಗೆ ಸನ್ಮಾನ ನಡೆಯಲಿದೆ.

ಎಸ್ ಎಸ್ ಎಲ್ ಸಿ ಹಾಗೂ ಪಿ.ಯು.ಸಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುದು. ಎಂದು ಕಾರ್ಯಕ್ರಮದ ಸಂಘಟಕರಾದ ಬಿರುವೆರ್ ಸೇವಾ ಟ್ರಸ್ಟ್ (ರಿ.)ಕಡೇಶಿವಾಲಯ ತಿಳಿಸಿದ್ದಾರೆ.