Friday, January 24, 2025
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂಟ್ವಾಳ ನಗರ ಠಾಣಾ ಪೋಲೀಸರು – ಕಹಳೆ ನ್ಯೂಸ್

ಬಂಟ್ವಾಳ : ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಇಲಿಯಾಸ್ ಯಾನೆ ಇಲ್ಯಾಸ್ (50) ಬಂಧಿತ ಆರೋಪಿ. ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣದ ಆರೋಪಿಯಾಗಿದ್ದು, ಈತನ ಮೇಲೆ ಕಲಂ 341 , 504, 324,506 ಜೊತೆಗೆ 34 ಐಪಿಸಿ ಯಡಿಲ್ಲಿ ಪ್ರಕರಣ ದಾಖಲಾಗಿದ್ದು, ಸುಮಾರು 8 ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಜಾಹೀರಾತು
ಜಾಹೀರಾತು
ಜಾಹೀರಾತು

ಈತನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು