Wednesday, January 22, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಗರ್ಭಗುಡಿಯ ಪ್ರಧಾನ ದಾರಂದಕ್ಕೆ ನೂತನ ಬೆಳ್ಳಿಯ ಕವಚ ಸಮರ್ಪಣೆ – ಕಹಳೆ ನ್ಯೂಸ್

ಪುತ್ತೂರು: ನವೀನ್ ಕುಮಾರ್ ಭಂಡಾರಿ ದಂಪತಿ ಮತ್ತು ಮನೆಯವರಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ದೇವರ ಪ್ರಧಾನ ಗರ್ಭಗುಡಿಯ ದಾರಂದಕ್ಕೆ ಬೆಳ್ಳಿಯ ಕವಚ ಸಮರ್ಪಣೆ ಮಾಡಲಾಯಿತು.

ದಾರಂದ ಕವಚಕ್ಕೆ ಸುಮಾರು 8 ಕೆ ಜಿ ಬೆಳ್ಳಿಯನ್ನು ಬಳಕೆ ಮಾಡಲಾಗಿದ್ದು, ಶ್ರೀ ಮಹಾಲಿಂಗೇಶ್ವರ ದೇವಳದ ಹಿಂದಿನ ಕಾರ್ಯನಿರ್ವಹಣಾಧಿಕಾರಿ ಮತ್ತು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಮತ್ತು ಮನೆಯವರು ಬೆಳ್ಳಿಯ ದಾರಂದ ಕವಚ ಸಮರ್ಪಣೆ ಮಾಡಿದರು. ದಾರಂದ ಕವಚ ಕೆಲಸ ನಿರ್ವಹಿಸಿದ ಮುಳಿಯ ಜ್ಯುವೆಲ್ಸ್ ಸಂಸ್ಥೆಯಿಂದ ಬೆಳಿಗ್ಗೆ ಮೆರವಣಿಗೆ ಮೂಲಕ ಬೆಳ್ಳಿಯ ದಾರಂದ ಕವಚವನ್ನು ದೇವಸ್ಥಾನಕ್ಕೆ ತರಲಾಯಿತು. ಬಳಿಕ ದೇವಳದ ಸತ್ಯಧರ್ಮ ನಡೆಯಲ್ಲಿಟ್ಟು ಸಮರ್ಪಣಾ ಪ್ರಾರ್ಥನೆ ಮಾಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ಮಾಣಿಲ ಶ್ರೀ ಮೋಹನದಾಸ ಪರಮ ಹಂಸ ಸ್ವಾಮೀಜಿ,ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರು ಮತ್ತು ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಹಲವಾರು ಮಂದಿ ಭಕ್ತರು ಉಪಸ್ಥಿತರಿದ್ದರು.