Monday, January 20, 2025
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಸರ್ಟಿಫಿಕೇಟ್ ಕೋರ್ಸ್ ಆರಂಭ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯ ಇಲ್ಲಿ ಕಾಲೇಜು ಸ್ವಾಯತ್ತತೆಯನ್ನು ಪಡೆದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸರ್ಟಿಫಿಕೇಟ್ ಕೋರ್ಸ್ ಗಳ ತರಬೇತಿಯನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು.

ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳ ಬಗೆಗೆ ತರಬೇತಿಯನ್ನು ನೀಡುವುದರಿಂದ ಮುಂದೆ ಉದ್ಯೋಗದ ಸಂದರ್ಭದಲ್ಲಿ ಸಹಾಯಕವಾಗುತ್ತದೆ ಎನ್ನುವ ದೃಷ್ಟಿಯಿಂದ ಈ ಸರ್ಟಿಫಿಕೇಟ್ ಕೋರ್ಸ್ ಗಳನ್ನು ಆರಂಭಿಸಲಾಗಿದೆ. ಫೊಟೋಶಾಪ್, ವಿಡಿಯೋ ಎಡಿಟಿಂಗ್, ಟ್ಯಾಲಿ, ಫೋಟೋಗ್ರಫಿ ವರದಿಗಾರಿಕೆ, ಸಂವಹನ ಕೌಶಲ್ಯ ಹೀಗೆ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಕೋರ್ಸುಗಳನ್ನು ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ತಿಳಿಸಿದ್ದಾರೆ. ಕಾಲೇಜಿನ ಗಣಕ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರಕಾಶ್ ಕುಮಾರ್.ಪಿ. ಹಾಗೂ ಬಿಬಿಎ ವಿಭಾಗದ ಮುಖ್ಯಸ್ಥೆ ರೇಖಾ.ಪಿ ಸಂಯೋಜಕರಾಗಿ ಸಹಕರಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು