ಇಷ್ಟಾರ್ಥ ಸಿದ್ಧಿಗಾಗಿ ಶ್ರೀ ಕ್ಷೇತ್ರ ಪಣೋಲಿಬೈಲ್‌ನಲ್ಲಿ ಹರಕೆ ಕೋಲ ನೇರವೇರಿಸಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ : ವಿರೋಧ ವ್ಯಕ್ತಪಡಿಸಿದ ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ –ಕಹಳೆ ನ್ಯೂಸ್
ಮಂಗಳೂರು : ಇಷ್ಟಾರ್ಥ ಸಿದ್ಧಿಗಾಗಿ ಬಂಟ್ವಾಳದ ಶ್ರೀ ಕ್ಷೇತ್ರ ಪಣೋಲಿಬೈಲ್‌ನಲ್ಲಿ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದ ಯು.ಟಿ ಖಾದರ್ ವಿರುದ್ಧ ಮುಸ್ಲಿಂ ಮುಖಂಡನೋರ್ವ ವಿರೋಧ ವ್ಯಕ್ತಪಡಿಸಿದ್ದಾರೆ.
ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಎಂಬುವವರು ಯು.ಟಿ. ಖಾದರ್ ಬಗ್ಗೆ ಆಕ್ಷೇಪಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ‘ಕೊರಗಜ್ಜನ ಭಕ್ತ ಯು.ಟಿ ಖಾದರ್ ನನ್ನು ಮುಸ್ಲಿಮರು ಬರೀ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಖಂಡರಾಗಿ ಕಾಣುವುದು ಬೇಡ. ಉಲೆಮಾ, ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಮುಸ್ಲಿಂ ನಾಯಕನಾಗಿ ಹತ್ತಿಸುವುದು ತರವಲ್ಲ. ಅದು ಆತನ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾಗಿತ್ತೆ. ಖಾದರ್ ಕೊರಗಜ್ಜನಿಗೂ ಕಲ್ಲುರ್ಟಿ, ಪಂಜುರ್ಲಿಗೂ ಆರಾಧಿಸಲಿ. ಪ್ರಸಾದ ಪಡೆದು ತಲೆಗೆ ಮೆತ್ತಿಕೊಂಡು ನರಕಕ್ಕೆ ಹೋಗಲಿ. ಅದು ಆತನ ವೈಯಕ್ತಿಕ ಸ್ವಾತಂತ್ರ‍್ಯ. ಅದು ಭಾರತದಲ್ಲಿ ಎಲ್ಲರಿಗೂ ಇರುವ ಸಂವಿಧಾನಿಕ ಸ್ವಾತಂತ್ರ. ಅದನ್ನು ತಡೆಯುವ ಹಕ್ಕು ನನಗಿಲ್ಲ. ಆದರೆ ಧಾರ್ಮಿಕ ನಾಯಕನಾಗಿ ನಾವು ಅಂಗೀಕರಿಸುವುದು, ಆತನ ಭೂತಾರಾಧನೆಯನ್ನು ನಾವು ಒಪ್ಪಿಕೊಂಡAತಾಗುತ್ತದೆ. ಉಲಮಾಗಳು ಅವನಿಗೆ ಗೌರವ ಕೊಡುವುದು ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಸಂದೇಶವಾಗಿ ಪರಿಣಮಿಸುತ್ತದೆ ಎಂದು ಯು.ಟಿ.ಖಾದರ್ ನಡವಳಿಕೆ ಆಕ್ಷೇಪಿಸಿ ಸಾಲೆತ್ತೂರು ಫೈಝಿ ಪೋಸ್ಟ್ ಹಂಚಿಕೊAಡಿದ್ದಾರೆ.