Sunday, January 19, 2025
ದಕ್ಷಿಣ ಕನ್ನಡಮೂಡಬಿದಿರೆಯಕ್ಷಗಾನ / ಕಲೆಶಿಕ್ಷಣಸುದ್ದಿ

ಮೂಡಬಿದಿರೆ ಆಳ್ವಾಸ್ ವಿದ್ಯಾಗಿರಿಯಲ್ಲಿ ಫೆ.06ರಂದು (ನಾಳೆ) ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2023-24 ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡಬಿದಿರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡಬಿದಿರೆ ಸಹಯೋಗದೊಂದಿಗೆ ಫೆ.06ರಂದು ಮೂಡಬಿದಿರೆ ಆಳ್ವಾಸ್ ವಿದ್ಯಾಗಿರಿಯ ಕೃಷಿಸಿರಿ ವೇದಿಕೆ ಆವರಣದಲ್ಲಿ ಪ್ರಾಥಮಿಕ ಮತ್ತು ಪೌಢಶಾಲಾ ವಿದ್ಯಾರ್ಥಿಗಳಿಗಾಗಿ ಯಕ್ಷಧ್ರುವ – ಯಕ್ಷಶಿಕ್ಷಣ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2023-24 ಯಕ್ಷಗಾನ ಕಲೆಯಾಧಾರಿತ ರಾಜ್ಯ ಮಟ್ಟದ ಸ್ಪರ್ಧೆ ನಡೆಯಲಿದೆ.

ಬೆಳಗ್ಗೆ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವೇದಿಕೆಯಲ್ಲಿ ಚೌಕಿ ಪೂಜೆಯೊಂದಿಗೆ ಕಾರ್ಯಕ್ರಮ ಮೊದಲ್ಗೊಂಡು 9.00ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಧಾನಸಭೆಯ ಸಭಾಪತಿ ಯು.ಟಿ ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಕಾಂಗ್ರೇಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಉದ್ಯಮಿ ಕೆ.ಶ್ರೀಪತಿ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಉದ್ಘಾಟನಾ ಸಮಾರಂಭದ ಬಳಿಕ ಬೆಳಿಗ್ಗೆ 9.30ಗಂಟೆಯಿಂದ ಸಂಜೆ 5.00ಗಂಟೆಯವರೆಗೆ ಯಕ್ಷರೂಪಕ ಸ್ಪರ್ಧೆ ನಡೆಯಲಿದೆ. ಇನ್ನು ಸಂಜೆ ಮುಲ್ಕಿ-ಮೂಡಬಿದಿರೆ ವಿಧಾನಸಭಾ ಕ್ಷೇತ್ರ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಮಂಗಳೂರು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ.) ನ ಗೌರವಾಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ , ಪ್ರಧಾನ ಸಂಚಾಲಕರಾದ ಐಕಳ ಹರೀಶ್ ಶೆಟ್ಟಿ ಹಾಗೂ ಶಶಿಧರ್ ಬಿ ಶೆಟ್ಟಿ ಬರೋಡ ಹಾಗೂ ಮತ್ತಿತ್ತರರು ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.