Monday, January 20, 2025
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಫೆ.12 ರಿಂದ 23ರವರೆಗೆ ಅಧಿವೇಶನ, ಫೆ.16ರಂದು ಬಜೆಟ್‌ ಮಂಡನೆ : ಸ್ಪೀಕರ್‌ ಯು.ಟಿ.ಖಾದರ್‌ – ಕಹಳೆ ನ್ಯೂಸ್

ಫೆಬ್ರವರಿ 12ರಿಂದ 23ರವರೆಗೆ ವಿಧಾನಮಂಡಲದ ಅಧಿವೇಶನ ಆರಂಭಗೊಳ್ಳಲಿದೆ. ಫೆ.12ರಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ ಎಂದು ವಿಧಾನಸಭೆಯ ಸ್ಪೀಕರ್‌ ಯು.ಟಿ.ಖಾದರ್‌ ಅವರು ತಿಳಿಸಿದರು.

 

ಜಾಹೀರಾತು
ಜಾಹೀರಾತು
ಜಾಹೀರಾತು

ಅಧಿವೇಶನಕ್ಕೂ ಮುನ್ನ ಫೆ.9ರಂದು ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನಲ್ಲಿ ಶಾಸಕರಿಗೆ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಸಕರಿಗೆ ಬಜೆಟ್‌ ಅಧಿವೇಶನದ ಸ್ವರೂಪ, ಚರ್ಚೆಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು ಮತ್ತು ಬಜೆಟ್‌ ಅಧಿವೇಶನದ ವರದಿಗಾರಿಕೆ ಬಗ್ಗೆಯೂ ಮಾಧ್ಯಮ ಪ್ರತಿನಿಧಿಗಳಿಗೆ ವಿಶೇಷ ತರಬೇತಿ ನೀಡಲಾಗುವುದು ಎಂದು ವಿವರಿಸಿದರು.

ಸ್ಪೀಕರ್‌ ಖಾದರ್‌ ಅವರು ಈ ತರಬೇತಿ ಕಾರ್ಯಾಗಾರಕ್ಕೆ ವಿಧಾನಪರಿಷತ್‌ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಚಾಲನೆ ನೀಡಲಿದ್ದಾರೆ ಎಂದರು.

ಫೆ.16ರಂದು ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡನೆ
ಫೆ.16ರಂದು ಸಿಎಂ ಅವರು ಬಜೆಟ್‌ ಮಂಡಿಸಲಿದ್ದು, ಆಯವ್ಯಯದ ಮೇಲೆ ಸಾಮಾನ್ಯ ಚರ್ಚೆ ನಡೆಯಲಿದೆ ಎಂದು ಸ್ಪೀಕರ್‌ ಖಾದರ್‌ ಅವರು ವಿವರಿಸಿದರು.

12ರಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ನಡೆದು ತದನಂತರ ನೀರ್ಣಯ ಅಂಗೀಕಾರವಾಗಲಿದೆ. ರಾಜ್ಯಪಾಲರ ಭಾಷಣದ ನಂತರ 16ನೇ ವಿಧಾನಸಭೆಯ 02ನೇ ಅಧಿವೇಶನ ಮುಕ್ತಾಯವಾದ ನಂತರ ಇಲ್ಲಿಯವರೆಗೆ ನಿಧನ ಹೊಂದಿದ ಗಣ್ಯ ವ್ಯಕ್ತಿಗಳ ಕುರಿತು ಸಂತಾಪ ಸೂಚನಾ ನಿರ್ಣಯಗಳನ್ನು ಮಂಡಿಸಲಾಗುವುದು ಎಂದರು.

10 ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ 8 ದಿನಗಳ ಕಾಲ ಪ್ರಶ್ನೋತ್ತರ ಕಲಾಪಗಳನ್ನ ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನಸೆಳೆಯುವ ಸೂಚನೆಗಳು, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳ ಕಾರ್ಯಕಲಾಪಗಳನ್ನು ನಡೆಸಲಾಗುವುದು ಎಂದರು.

ಶಾಸಕರಿಗೆ ವೈವಿಧ್ಯಮಯ ಭೋಜನ: ಅಧಿವೇಶನ ಆರಂಭವಾದಾಗಿನಿಂದ ಮುಕ್ತಾಯವಾಗುವವರೆಗೆ 10 ದಿನಗಳ ಕಾಲ ಬೆಳಗ್ಗೆ 8ರಿಂದ 9ರವರೆಗೆ ಸದನದ ಸದಸ್ಯರಿಗೆ ಲಘು ಉಪಹಾರ ಮತ್ತು ನಿತ್ಯ ಮಧ್ಯಾಹ್ನ ಬೆಂಗಳೂರಿನ ವಿವಿಧ ಹೋಟಲ್‌ಗಳ ವೈವಿಧ್ಯಮಯವಾದ ರುಚೀಕರ,ಆರೋಗ್ಯಪೂರ್ಣವಾದ ಭೋಜನದ ವ್ಯವಸ್ಥೆಯನ್ನ ಮಾಡಲಾಗುತ್ತಿದೆ ಎಂದು ಸ್ಪೀಕರ್‌ ಖಾದರ್‌ ಅವರು ವಿವರಿಸಿದರು. ಭದ್ರತೆಯನ್ನು ಇನ್ನಷ್ಟು ಉತ್ತಮಗೊಳಿಸಲು ವ್ಯವಸ್ಥೆ ಮಾಡಲಾಗುವುದು ಎಂದರು.
ಮಾಧ್ಯಮದವರು ಅತ್ಯುತ್ತಮ ವಿಷಯಗಳ ಕುರಿತು ಬೆಳಕು ಚೆಲ್ಲಿ ಸದನದ ಕಲಾಪಕ್ಕೆ ಮೆರಗು ನೀಡಬೇಕು ಎಂದು ಅವರು ಹೇಳಿದರು.