Monday, January 20, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

ಹಾಲು ಉತ್ಪಾದಕರ ಪ್ರೋತ್ಸಾಹ ಧನ 716 ಕೋಟಿ ತಕ್ಷಣ ಬಿಡುಗಡೆ ಮಾಡಿ – ಯಡಿಯೂರಪ್ಪ ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ನೀಡಿದ ಪ್ರೋತ್ಸಾಹ ಧನ ತಡೆ, ಕಾಂಗ್ರೆಸ್ ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಹಾಲು ಉತ್ಪಾದಕರ ಪ್ರೋತ್ಸಾಹ ಧನ 716 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲದೇ ಇದ್ದರೆ ರೈತರು ಜಾನುವಾರು ಸಮೇತ ಸರ್ಕಾರದ ವಿರುದ್ಧ ತಿರುಗಿ ಬೀಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದರು.

ತಮ್ಮ ನಿವಾಸದ ಬಳಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅದರ ಪರಿಣಾಮ ಬಿಜೆಪಿ ಆಡಳಿತದಲ್ಲಿದ್ದಾಗ 26 ಲಕ್ಷ ಗ್ರಾಮೀಣ ರೈತರಿಂದ 80-85 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಈ ಸರ್ಕಾರ 716 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ. ಇದರ ಪರಿಣಾಮ 80-85 ಲಕ್ಷ ಲೀಟರ್ ಹಾಲು ಸಂಗ್ರಹಣೆ ಆಗುತ್ತಿದ್ದ ಹಾಲು ಈಗ 10 ಲಕ್ಷ ಲೀಟರ್ ಕಡಿಮೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪಾಪದ ಸರ್ಕಾರ ಇದು

ರೈತರ ಪ್ರೋತ್ಸಾಹ ಧನ ಉಳಿಸಿಕೊಂಡ ಪಾಪದ ಸರ್ಕಾರ ಇದು. ಮಾನ ಮಾರ್ಯಾದೆ ಇದ್ದರೇ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಿ ಎಂದು ಆಗ್ರಹಿಸಿದರು.

ಜಾನುವಾರುಗಳಿಂದಲೂ ಸರ್ಕಾರಕ್ಕೆ ಶಾಪ

ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ಜನ ಮಾತ್ರವಲ್ಲ ಜಾನುವಾರುಗಳು ಸರ್ಕಾರಕ್ಕೆ ಶಾಪ ಹಾಕುತ್ತಿದೆ. ಜನರ ಕೋಪ ಮಾತ್ರವಲ್ಲ, ಜಾನುವಾರುಗಳ ಕೋಪಕ್ಕೆ ರಾಜ್ಯ ಸರ್ಕಾರ ಬಲಿಯಾಗಿದೆ ಎಂದು ಹರಿಹಾಯ್ದರು.

ಕೇಂದ್ರದ ವಿರುದ್ಧ ದೂರುವುದನ್ನು ನಿಲ್ಲಿಸಿ

ರಾಜಸ್ವ ಸ್ವೀಕೃತಿ ಗುರಿ ಕಡಿಮೆಯಾಗಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸುವುದನ್ನು ಬಿಟ್ಟು ಕೇಂದ್ರದ ವಿರುದ್ಧ ದೂರುತ್ತಿದೆ. ಡಿಸೆಂಬರ್ ಅಂತ್ಯಕ್ಕೆ 2,38,000 ತೆರಿಗೆ ಸಂಗ್ರಹ ಗುರಿ ಇತ್ತು. ಆದರೆ 1.68 ಲಕ್ಷ ಕೋಟಿ ರೂ. ಮಾತ್ರ ಸಂಗ್ರಹವಾಗಿದೆ. ಶೇ.67ರಷ್ಟು ಮಾತ್ರ ಪ್ರಗತಿಯಾಗಿದೆ. ನಮ್ಮ ಸರ್ಕಾರ ಇದ್ದಾಗ ಡಿಸೆಂಬರ್ ಅಂತ್ಯಕ್ಕೆ ಶೇ.82ರಷ್ಟು ಗುರಿ ಸಾಧನೆಯಾಗಿತ್ತು. ನಿಮ್ಮದೇ ಸರ್ಕಾರದ ಗುರಿ ತಲುಪಲು ನಿಮಗೆ ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

ಕೋರ್ ಕಮಿಟಿ ಸಭೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ೆ.10ರಂದು ಬೆಂಗಳೂರಿಗೆ ಬರುತ್ತಿದ್ದಾರೆ. ಈ ದಿನ ಬೆಂಗಳೂರಿನಲ್ಲಿ ಕ್ಲಸ್ಟರ್ ಸಭೆ ಹಾಗೂ ಕೋರ್ ಕಮಿಟಿ ಸಭೆ ನಡೆಸಲಿದ್ದು, ಸಂಜೆ 5 ಗಂಟೆಗೆ ಮೈಸೂರಿನ ಸುತ್ತೂರು ಮಠಕ್ಕೂ ಭೇಟಿ ನೀಡಲಿದ್ದಾರೆ. ಇನ್ನು ಅವರ ಎಲ್ಲ ಕಾರ್ಯಕ್ರಮ ಅಂತಿಮಗೊಂಡಿಲ್ಲ. ಆದರೆ ಕೋರ್ ಕಮಿಟಿ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಜಯೇಂದ್ರ ತಿಳಿಸಿದರು.