Saturday, November 23, 2024
ರಾಜಕೀಯರಾಷ್ಟ್ರೀಯಸುದ್ದಿ

ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆ – ಕಹಳೆ ನ್ಯೂಸ್

ಡೆಹ್ರಾಡೂನ್‌: ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಉತ್ತರಾಖಂಡ ಸರ್ಕಾರ (Uttarakhand Government) ಏಕರೂಪ ನಾಗರಿಕ ಸಂಹಿತೆ(UCC) ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ.

ಇಂದು ಸಂವಿಧಾನದ ಮೂಲ ಪ್ರತಿಯೊಂದಿಗೆ ವಿಧಾನಸಭೆ ಪ್ರವೇಶಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಅವರು ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಮಂಡಿಸಿದರು. ಮಸೂದೆ ಮಂಡನೆಯ ವೇಳೆ ಬಿಜೆಪಿ ಸದಸ್ಯರು ರಾಮ್‌ ರಾಮ್‌ ಎಂದು ಮೇಜು ಕುಟ್ಟಿ ಸಂತಸ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಎಲ್ಲಾ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಪ್ರಸ್ತಾಪಿಸುವ ಅಂಶ ಈ ಮಸೂದೆಯಲ್ಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಏಕರೂಪದ ನಾಗರಿಕ ಸಂಹಿತೆ ರಚನೆ ಸಂಬಂಧ ಸರ್ಕಾರ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶ ರಂಜನಾ ಪ್ರಕಾಶ್‌ ನೇತೃತ್ವದ ಸಮಿತಿಯನ್ನು ರಚಿಸಿತ್ತು. ಈ ಸಮಿತಿ 4 ಸಂಪುಟ ಹೊಂದಿರುವ 749 ಪುಟಗಳಿರುವ ವರದಿ ಮತ್ತು ಹಲವು ಶಿಫಾರಸುಗಳನ್ನು ಸರ್ಕಾರಕ್ಕೆ ನೀಡಿತ್ತು.

ಸಮಿತಿ ಆನ್‌ಲೈನ್‌ ಮೂಲಕ 2.33 ಲಕ್ಷ ಪ್ರತಿಕ್ರಿಯೆ ಪಡೆದಿದ್ದರೆ 70ಕ್ಕೂ ಹೆಚ್ಚು ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಿ ಜನರಿಂದ ಅಭಿಪ್ರಾಯ ಸಂಗ್ರಹಿಸಿತ್ತು.

ಬಹುಪತ್ನಿತ್ವ ಮತ್ತು ಬಾಲ್ಯವಿವಾಹದ ಮೇಲೆ ಸಂಪೂರ್ಣ ನಿಷೇಧ, ಎಲ್ಲಾ ಧರ್ಮದ ಹೆಣ್ಣು ಮಕ್ಕಳಿಗೆ ಪ್ರಮಾಣೀಕೃತ ಮದುವೆಯ ವಯಸ್ಸು ಮತ್ತು ವಿಚ್ಛೇದನಕ್ಕೆ ಏಕರೂಪದ ಪ್ರಕ್ರಿಯೆ ಸೇರಿದಂತೆ ಹಲವು ಪ್ರಸ್ತಾಪಗಳಿವೆ. ವಿಧಾನಸಭೆಯಲ್ಲಿ ಈ ಮಸೂದೆ ಅಂಗೀಕಾರಗೊಂಡು ರಾಜ್ಯಪಾಲರಿಂದ ಅಂಕಿತ ಬಿದ್ದರೆ ಯುಸಿಸಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ ಪಾತ್ರವಾಗಲಿದೆ.

ಗುಜರಾತ್ ಹಾಗೂ ಅಸ್ಸಾಂ ಸೇರಿದಂತೆ ದೇಶದ ಹಲವು ಬಿಜೆಪಿ ಆಡಳಿತದ ರಾಜ್ಯಗಳು ಉತ್ತರಾಖಂಡ ಯುಸಿಸಿಯನ್ನು ಮಾದರಿಯಾಗಿ ಅನುಸರಿಸಲು ಮುಂದಾಗಿವೆ.