Saturday, November 23, 2024
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂಪಾಯಿ ದಂಡ ವಿಧಿಸಿದ ಹೈಕೋರ್ಟ್ – ಕಹಳೆ ನ್ಯೂಸ್

 ಡಿಜಿಟಲ್ ಡೆಸ್ಕ್:ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ 1೦ ಸಾವಿರ ರೂಪಾಯಿ ದಂಡ ವಿಧಿಸಿದೆ. ಕಾಂಗ್ರೆಸ್ ನಾಯಕರ ಪ್ರತಿಭಟನೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗಿ ಪ್ರಕರಣ ದಾಖಲಾಗಿದ್ದು, ಹೈಕೋರ್ಟ್ ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗಬೇಕು ಎಂದು ಆದೇಶಿಸಿದೆ.

2022 ಏಪ್ರಿಲ್ 14 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದರು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಅಂದಿನ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರದಿಂತೆ ಸಾಕಷ್ಟು ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾದ ಕಾರಣ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಂಗ್ರೆಸ್ ನಾಯಕರ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ಎನ್‌ಬಿಡಬ್ಲೂ ಜಾರಿ ಮಾಡಿತ್ತು. ಈ ವಾರೆಂಟ್ ಹಾಗೂ ವಿಚಾರಣೆ ರದ್ದು ಕೋರಿ ಕೈ ನಾಯಕರು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದ್ದು, ತಲಾ ಎಲ್ಲ ನಾಯಕರಿಗೆ 10 ಸಾವಿರ ರೂಪಾಯಿ ದಂಡ ಹಾಗೂ ಮಾರ್ಚ್ ೬ರಂದುವಿಚಾರಣೆಗೆ ಹಾಜರಾಗುವಂತೆ ಹೇಳಿದೆ. ಜನಪ್ರತಿನಿಧಿಗಳೇ ಕಾನೂನು ಪಾಲಿಸೋದಿಲ್ಲ ಎಂದಾದರೆ ಜನರಿಂದ ಏನು ನಿರೀಕ್ಷೆ ಮಾಡೋಕೆ ಸಾಧ್ಯ? ಪ್ರತಿಭಟನೆಗಳಿಂದ ಜನರಿಗೆ ತಲೆಬಿಸಿಯಾಗಿದೆ. ರಸ್ತೆ ಅಡ್ಡಿಯಾಗಿ ಜನರಿಗೆ ತೊಂದರೆ ಮಾಡೋದನ್ನು ಒಪ್ಪೋದಿಲ್ಲ ಎಂದು ಕೋರ್ಟ್ ಹೇಳಿದೆ.