ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬದಲ್ಲಿ ವಾಕ್ -ಶ್ರವಣದೋಷ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ” – ಕಹಳೆ ನ್ಯೂಸ್
ಬಂಟ್ವಾಳ: ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬಂಟ್ವಾಳ, ಲಯನ್ಸ್ ಕ್ಲಬ್ ವಿಟ್ಲ, ಕದಳಿ ಮಹಿಳಾ ವೇದಿಕೆ ದಕ್ಷಿಣ ಕನ್ನಡ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಹಾಗೂ ವಾಕ್ ಮತ್ತು ಶ್ರವಣ ವಿಭಾಗ ಯನಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇವುಗಳ ಸಹಯೋಗದಲ್ಲಿ “ವಾಕ್ -ಶ್ರವಣದೋಷ ತಪಾಸನ ಹಾಗೂ ಚಿಕಿತ್ಸಾ ಶಿಬಿರ ” ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬದಲ್ಲಿ ಬೆಳಿಗ್ಗೆ ಗಂಟೆ 9 ರಿಂದ ಮಧ್ಯಾಹ್ನ ಗಂಟೆ 1ರ ತನಕ ನಡೆಯಲಿದೆ.
ಕಾರ್ಯಕ್ರಮವನ್ನು ಮಜಿ ಶಾಲಾ ದತ್ತು ಸಂಸ್ಥೆಯ ಮುಖ್ಯಸ್ಥರಾದ ಮಾತ ಡೆವಲಪರ್ಸ್ ಸುರತ್ಕಲ್ ನ ಎಂ ಡಿ ಸಂತೋμï ಕುಮಾರ್ ಶೆಟ್ಟಿ ಅರೆಬೆಟ್ಟು ಉದ್ಘಾಟಿಸಲಿದ್ದು, ಮಜಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ್ ಸಿಂಗೇರಿ ಅಧ್ಯಕ್ಷತೆ ವಹಿಸಲಿರುವರು. ವಿರಕಂಬ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜನಾರ್ಧನ ಪೂಜಾರಿ ನಾರುಕೋಡಿ,ವಾಕ್ ಮತ್ತು ಶ್ರವಣ ವಿಭಾಗ ಯನಪೆÇೀಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ದೇರಳಕಟ್ಟೆಯ ಎಚ್ ಒ ಡಿ ಶ್ವೇತ ಪ್ರಭು, ಲಯನ್ಸ್ ಕ್ಲಬ್ ವಿಟ್ಲದ ಅಧ್ಯಕ್ಷೆ ಜಲಜಾಕ್ಷಿ ಬಾಲಕೃಷ್ಣ ಗೌಡ, ಮಜಿ ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ. ಮೊದಲಾದವರ ಗೌರವ ಉಪಸ್ಥಿತರಿದ್ದರು.
ಶಾಲಾ ಮಕ್ಕಳು, ಮಕ್ಕಳ ಪೆÇೀಷಕರು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಘಟಕರು ತಿಳಿಸಿದ್ದಾರೆ.