Sunday, January 19, 2025
ಆರೋಗ್ಯದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ : ತಾಲೂಕು ಆಡಳಿತ ಸೌಧದಲ್ಲಿ ನಡೆದ ತಾಲೂಕು ಕೆಡಿಪಿ ಸಭೆ – ಕಹಳೆ ನ್ಯೂಸ್

ಮೂಡುಬಿದಿರೆ : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪೂರ್ಣಕಾಲಿಕ ವೈದ್ಯರಿಲ್ಲದಿರುವುದರಿಂದ ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆ ವಿಳಂಬವಾಗುತ್ತಿದೆ. ಪೋಲೀಸ್ ಸಿಬಂದಿ ನೇಮಕದ ಸಮಸ್ಯೆ ಹಾಗೂ ನೊಂದ ಸಂಬAಧಿಕರು ಆಕ್ರೋಶಕ್ಕೊಳಗಾಗುತ್ತಾರೆ. ಹೀಗಾಗಿ ವೈದ್ಯರು ಕೇಂದ್ರ ಸ್ಥಳದಲ್ಲಿಯೇ ಇರುವಂತಹ ವ್ಯವಸ್ಥೆಯಾಗಬೇಕು ಎಂದು ಪೋಲೀಸ್ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ ಹೇಳಿದರು.

ಶಾಸಕ ಉಮನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ಮೊದಲ ತಾಲೂಕು ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು.
ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರ ನೇಮಕವಾಗಿದೆ. ಹೊಸ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದ್ದು ಎರಡು ವಾರದೊಳಗೆ ಕಾರ್ಯರೂಪಕ್ಕೆ ತರಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಭಂಡಾರಿ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಡುಬಿದಿರೆ ಮೈನ್ ಶಾಲೆ, ಬೆಳುವಾಯಿ ಮೈನ್ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಅಧಿಕವಾಗಿದ್ದು ಹೊಸ ಕಟ್ಟಡಕ್ಕೆ ಬೇಡಿಕೆಯಿಡುತ್ತಿದ್ದಾರೆ. ಶಿಕ್ಷಣ ಇಲಾಖೆ ಹೊಸ ಕಟ್ಟಡಕ್ಕೆ ಅನುಮತಿ ನೀಡುತ್ತಿಲ್ಲ. ದುರಸ್ಥಿಗೆ ಕಟ್ಟಡಗಳಿಲ್ಲ ಎಂದು ಪಂಚಾಯತ್‌ರಾಜ್ ಇಂಜಿನಿಯರಿAಗ್ ವಿಭಾಗದ ಸಹಾಯಕ ಇಂಜಿನಿಯರ್ ಜಗದೀಪ್ ಅಸಹಾಯಕತೆ ತೋಡಿಕೊಡರು. ಹೆಚ್ಚು ವಿದ್ಯಾರ್ಥಿಗಳಿರುವಲ್ಲಿ ಹೊಸ ಕಟ್ಟಡ ನಿರ್ಮಿಸುವುದು ಅನಿವಾರ್ಯ. ಲಭ್ಯವಿರುವ ಅನುದಾನದಲ್ಲಿ ಹೊಸ ಕಟ್ಟಡ ನಿರ್ಮಿಸಲು ಇಲಾಖೆಯಿಂದ ಅನುಮತಿ ದೊರಕಿಸಿಕೊಡುವಂತೆ ಶಾಸಕ ಉಮನಾಥ ಕೋಟ್ಯಾನ್ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಸೂಚಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಡುಬಿದಿರೆಯಲ್ಲಿ ನಾಲ್ಕು ಕೋಟಿ ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಿದ ಸುಸಜ್ಜಿತ ಪ್ರವಾಸಿ ಮಂದಿರದ ಕಾಮಗಾರಿ ವಿಳಂಬದ ಬಗ್ಗೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಲಾಯ್ಡ್ ಸಂದೀಪ್ ಡಿಸಿಲ್ವ ಅವರನ್ನು ಪ್ರಶ್ನಿಸಿದರು.ಮೊದಲ ಹಂತದಲ್ಲಿ 2 ಕೋಟಿ ರೂ ಯೋಜನೆಯ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು ಅನುದಾನದ ಕೊರತೆಯಿಂದ ಕಾಮಗಾರಿ ವಿಳಂಬವಾಗಿದೆ. ಅಂಬೆಡ್ಕರ್ ಭವನ ನಿರ್ಮಾಣಕ್ಕೂ ಇದೇ ಪರಿಸ್ಥಿತಿಯಿದೆ ಎಂದು ಅಧಿಕಾರಿ ಉತ್ತರಿಸಿದರು. ಅಂಬೇಡ್ಕರ್ ಭವನದ ಜಾಗಕ್ಕೆ ಕನಿಷ್ಠ ತಡೆಗೋಡೆಯನ್ನಾದರೂ ನಿರ್ಮಿಸುವಂತೆ ಉಮನಾಥ ಕೋಟ್ಯಾನ್ ಸೂಚಿಸಿದರು.

ಮೂಡುಬಿದಿರೆ ಪರಿಸರದಲ್ಲಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುತ್ತಿರುವ ದೂರುಗಳು ಬರುತ್ತಿವೆ. ಅತೀ ಹೆಚ್ಚು ಶಿಕ್ಷಣ ಸಂಸ್ಥೆಗಳು ಇಲ್ಲಿರುವುದರಿಂದ ಡ್ರಗ್ಸ್ಗೆ ನಿಯಂತ್ರಣ ಹೇರಲು ಕಟ್ಟಿನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಮನಾಥ ಕೋಟ್ಯಾನ್ ಅಬಕಾರಿ, ಪೋಲಿಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೃಷಿ ಇಲಾಖೆಯಲ್ಲಿ ಸಿಬಂದಿ ಕೊರತೆಯಿದೆ. ಈಗ ತಾನೋಬ್ಬನೇ ಕರ್ತವ್ಯದಲ್ಲಿದ್ದು, ಕೆಲವೇ ತಿಂಗಳುಗಳಲ್ಲಿ ನಿವೃತ್ತಿಯಾಗಲಿದ್ದೇನೆ. ಬಳಿಕ ಇಲಾಖೆಯಲ್ಲಿ ಸಿಬಂದಿಯಿಲ್ಲದAತಹ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಕೃಷಿ ಅಧಿಕಾರಿ ವಿ.ಎಸ್ ಕುಲಕರ್ಣಿ ಸಮಸ್ಯೆ ತೋಡಿಕೊಂಡರು. ಈ ಕುರಿತು ವಿಧಾನಸಭೆಯಲ್ಲಿ ಪ್ರಶ್ನಿಸುವುದಾಗಿ ಉಮಾನಾಥ ಕೋಟ್ಯಾನ್ ಭರವಸೆ ನಿಡಿದರು.

ಮೆಸ್ಕಾಂನ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮೋಹನ ಬಿ, ಕುಡಿಯುವ ನೀರು ಮತ್ತು ನೈರ್ಮಲ್ಯಕರಣದ ಇಂಜಿನಿಯರ್ ಎಂ. ಶಿವಣ್ಣ, ಸಹಾಯಕ ವಲಯ ಅರಣ್ಯಾಧಿಕಾರಿ ಮಂಜುನಾಥ ಗಾಣಿಗ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪರವಾಗಿ ಹರೀಶ ಕೆ. ಸಮಾಜ ಕಲ್ಯಾಣ ಇಲಾಖೆಯ ಪರವಾಗಿ ಪ್ರೀತಿ, ಪಶುವೈದ್ಯ ಇಲಾಖೆಯ ಡಾ. ಗುರುರಾಜ್, ಅಬಕಾರಿ ನಿರೀಕ್ಷಕ ಸುಬ್ರಹ್ಮಣ್ಯ, ತಾ. ಪಂ. ಕರ‍್ಯನಿರ್ವಾಹಣಾಧಿಕಾರಿ ಲೋಕೇಶ, ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಪ್ರೋಬೆಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.