Sunday, November 24, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ : ಚತುಷ್ಪತ ರಾಷ್ಟ್ರೀಯ ಹೆದ್ದಾರಿಯ ಕಾಂಕ್ರೀಟ್ ರಸ್ತೆ ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್- ಕಹಳೆ ನ್ಯೂಸ್

ಬಂಟ್ವಾಳ : ಬಿಸಿರೋಡಿನಿಂದ ಅಡ್ಡಹೊಳೆವರೆಗೆ ನಡೆಯುವ ಚತುಷ್ಪತ ರಾಷ್ಟ್ರೀಯ ಹೆದ್ದಾರಿಯ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ವೀಕ್ಷಣೆ ನಡೆಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರ ದೂರನ್ನು ಆಲಿಸಿದ ಅವರು ಕೆಲವೊಂದು ಪರಿಹಾರ ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೈತ ಸಂಘ ಹಾಗೂ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬೆಳಿಗ್ಗೆ ಬಿಸಿರೋಡಿನಿಂದ ಗುಂಡ್ಯವರೆಗೆ ವೀಕ್ಷಿಸಲು ಅಧಿಕಾರಿಗಳ ಜೊತೆ ತೆರಳಿದರು.
ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣ ಗುರುವೃತ್ತದಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿಯನ್ನು ವೀಕ್ಷಣೆ ನಡೆಸಿದ ಬಳಿಕ ,ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿಯತ್ತ ತೆರಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೆಲ್ಕಾರ್ ನಲ್ಲಿ ಗುಡ್ಡವನ್ನು ಅಗೆದ ಪರಿಣಾಮವಾಗಿ ಕೆಲವೊಂದು ಮನೆಗಳಿಗೆ ಹಾನಿಯಾಗುವ ಸಂಭವವು ಇರುವುದರಿಂದ ಮತ್ತು ಇನ್ನು ಕೆಲವು ಮನೆಗಳಿಗೆ ಸಂಪರ್ಕ ರಸ್ತೆ ಕಡಿತಗೊಂಡ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತವಾದ ಬದಲಿ ವ್ಯವಸ್ಥೆ ಮಾಡಿಕೊಡುವ ಬಗ್ಗೆ ಚಿಂತನೆ ನಡೆಸುವ ಕುರಿತು ವಿಷಯ ಪ್ರಸ್ತಾಪ ಮಾಡಿದ್ದಲ್ಲದೆ,ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಯ ವೇಳೆ ದೂಳಿನ ಸಮಸ್ಯೆ ಉಂಟಾಗುತ್ತಿದ್ದು, ಸರಿಯಾಗಿ ನೀರು ಹಾಕುತ್ತಿಲ್ಲ ಎಂಬ ದೂರನ್ನು ಸಾರ್ವಜನಿಕರು ಜಿಲ್ಲಾಧಿಕಾರಿಯವರಲ್ಲಿ ನೀಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು ಇನ್ನು ಮುಂದೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ದೂರುಗಳು ಬರದ ರೀತಿಯಲ್ಲಿ ಸ್ಥಳೀಯ ಗ್ರಾ.ಪಂ.ನವರು ರಸ್ತೆ ನೀರು ಹಾಕುವ ಜವಾಬ್ದಾರಿ ವಹಿಸಬೇಕು ಎಂದು ತಹಶಿಲ್ದಾರ್ ಅವರಲ್ಲಿ ತಿಳಿಸಿದರು.
ದೂಳಿನ ಸಮಸ್ಯೆಯಿಂದ ಕಲ್ಲಡ್ಕ ಪರಿಸರದ ಅನೇಕರಿಗೆ ಅಸ್ತಮಾ, ಶ್ವಾಸಕೋಶದ ರೋಗ ಬಂದಿದ್ದು, ಈ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿ ಅವರಲ್ಲಿ ಅಳಲು ತೋಡಿಕೊಂಡಿರು.

ಸಾರ್ವಜನಿಕರ ನೀಡುವ ದೂರಿಗೆ ಕಂಪೆನಿಯ ಕೆಲಸಗಾರರು ಕಿವಿಗೊಡುವುದಿಲ್ಲ ಎಂದು ಅವರು ಆರೋಪ ಮಾಡಿದರು. ಮುಂದೆ ಇಂತಹ ಯಾವುದೇ ಸಮಸ್ಯೆ ಗಳು ಉದ್ಭವವಾಗಂತೆ ತಹಶಿಲ್ದಾರ್ ಎಚ್ಚರಿಕೆಯಿಂದ ನೋಡಿಕೊಳ್ಳುವಂತೆ ಅವರು ಸೂಚನೆ ನೀಡಿದರು.

ಕೆಲವು ಕಡೆಗಳಲ್ಲಿ ರಸ್ತೆ ಕಾಮಗಾರಿ ವೇಳೆ ಕುಡಿಯುವ ನೀರಿನಪೈಪ್ ಗಳನ್ನು ತುಂಡರಿಸಲಾಗಿದ್ದು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ , ಅಂತಹ ಕಡೆಗಳಲ್ಲಿ ಹೊಸ ಪೈಪ್ ಲೈನ್ ಅಳವಡಿಸಿ ಕುಡಿಯುವ ನೀರಿಗೆ ಯಾವುದೇ ಕುಂದುಬರದಂತೆ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್, ಬಂಟ್ವಾಳ ನಗರ ಪೆÇೀಲೀಸ್ ಠಾಣಾ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ, ಟ್ರಾಫಿಕ್ ಎಸ್.ಐ.ಸಂಜೀವ, ಕಂದಾಯ ನಿರೀಕ್ಷಕರುಗಳಾದ ವಿಜಯ್ ಮತ್ತು ಜನಾರ್ಧನ ಹಾಗೂ ಗ್ರಾಮ ಕರಣೀಕ ನಾಗರಾಜ್ ಮತ್ತಿತರ ಉಪಸ್ಥಿತರಿದ್ದರು.