Thursday, January 23, 2025
ಸುದ್ದಿ

ವಿಟ್ಟ : ಅಡ್ಯನಡ್ಕ ಕರ್ನಾಟಕ ಬ್ಯಾಂಕ್‌ಗೆ ನುಗ್ಗಿದ ಕಳ್ಳರು : ಅಪಾರ ಮೌಲ್ಯದ ಹಣ-ಒಡವೆ ಕಳವು..! – ಕಹಳೆ ನ್ಯೂಸ್

ಬ್ಯಾಂಕ್‌ಗೆ ಖದೀಮರು ನುಗ್ಗಿ ಹಣ-ಒಡವೆ ದೋಚಿದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕದಲ್ಲಿ ನಡೆದಿದೆ.


ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಕಳ್ಳತನ ನಡೆದಿದ್ದು, ಕಿಟಕಿಗಳನ್ನು ಮುರಿದು ಕಳ್ಳರು ಒಳನುಗ್ಗಿದ್ದಾರೆನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಮಾರು 20 ವರುಷ ಹಳೆಯ ಕಟ್ಟಡದಲ್ಲಿ ಈ ಬ್ಯಾಂಕ್ ಇದ್ದು, ಬ್ಯಾಂಕ್ ನ ಸುತ್ತಲೂ ಕಾಡು-ಪೊದೆಗಳೆ ಆವರಿಸಿಕೊಂಡಿದೆ. ಯಾವುದೇ ಮುಂಜಾಗ್ರತೆ ಇಲ್ಲದ ಕಟ್ಟಡದಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿದ್ದು, ಅಜಾಗರೂಕತೆಯೇ ಕಳ್ಳತನಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳಕ್ಕೆ ಆಗಮಿಸಿದ ವಿಟ್ಲ ಠಾಣಾ ನಿರೀಕ್ಷಕರಾದ ನಾಗರಾಜ್ ಹೆಚ್.ಇ ಮತ್ತು ತಂಡ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ತನಿಖೆಗಾಗಿ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಮತ್ತು ಪೊಲೀಸ್ ಹಿರಿಯ ಅಧಿಕಾರಿಗಳು ಬರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.