Sunday, January 19, 2025
ಸುದ್ದಿ

ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರೀ-ವೆಡ್ಡಿಂಗ್ ಶೂಟ್ : ವೈದ್ಯ ಜೋಡಿ ವಿರುದ್ಧ ಭಾರೀ ಆಕ್ರೋಶ – ಕಹಳೆ ನ್ಯೂಸ್

ಚಿತ್ರದುರ್ಗ : ಆಪರೇಷನ್ ಥಿಯೇಟರ್‌ನಲ್ಲಿ ವೈದ್ಯಾಧಿಕಾರಿಯೊಬ್ಬರು ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿದ್ದಾರೆ. ಭರಮಸಾಗರ ಹೋಬಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಈ ಮಹಾ ಯಡವಟ್ಟು ನಡೆದಿದ್ದು, ಪ್ರೀ-ವೆಡ್ಡಿಂಗ್ ಶೂಟ್ ವೀಡಿಯೋ ವೈರಲ್ ಆಗಿದೆ
ಚಡಾ. ಅಭಿಷೇಕ್ ಅವರಿಗೆ ಮುಂದಿನ ತಿಂಗಳು ಮದುವೆ ಇರೋದ್ರಿಂದ ಆಪರೇಷನ್ ಥಿಯೇಟರ್‌ನಲ್ಲೇ ಪ್ರೀ ವೆಡ್ಡಿಂಗ್ ಶೂಟ್ ಮಾಡಲಾಗಿದೆ. ಮದುವೆ ಆಗುವ ಗಂಡು, ಹೆಣ್ಣು ವ್ಯಕ್ತಿಗೆ ಆಪರೇಷನ್ ಮಾಡುತ್ತಿರುವಂತೆ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿದ್ದು, ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವೀಡಿಯೋ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.ಆಸ್ಪತ್ರೆಯಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿದ ವೀಡಿಯೋ ವೈರಲ್ ಆದ ಮೇಲೆ ಭರಮ ಸಾಗರ ಆಸ್ಪತ್ರೆಯ ವೈದ್ಯ ಡಾ.ಅಭಿಷೇಕ್ ಅವರನ್ನು ವಜಾಗೊಳಿಸಲಾಗಿದೆ. ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ಅವರು ಡಾ.ಅಭಿಷೇಕ್ ರನ್ನು ಸೇವೆಯಿಂದ ವಜಾಗೊಳಿಸಿದ್ದಾರೆ.


ಡಾ.ಅಭಿಷೇಕ್ ಭರಮಸಾಗರ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮುಂದಿನ ತಿಂಗಳ ಮದುವೆ ಇರುವ ಹಿನ್ನೆಲೆ ಆಸ್ಪತ್ರೆಯಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿದ್ದರು. ಸರ್ಕಾರಿ ಕಟ್ಟಡ ದುರ್ಬಳಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಡಾ.ಅಭಿಷೇಕ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು