Sunday, January 19, 2025
ದಕ್ಷಿಣ ಕನ್ನಡಸುದ್ದಿ

ಸಿರಿಯಲ್ ಗೂ ಎಂಟ್ರಿ ಕೊಟ್ಟ ದೈವಾರಾಧನೆ : ಕಲಾವಿದ ಪ್ರಶಾಂತ್ ಸಿ.ಕೆ ಹಾಗೂ ಧಾರವಾಹಿ ನಿರ್ದೇಶಕನ ವಿರುದ್ಧ ದೈವಾರಾಧಕರ ಆಕ್ರೋಶ-ಕಹಳೆ ನ್ಯೂಸ್

ಮಂಗಳೂರು : ರಿಷಭ್ ಶೆಟ್ಟಿ ನಿರ್ದೇಶನ ಕಾಂತಾರ ಚಿತ್ರದ ಬಳಿಕ ಕರಾವಳಿಯ ದೈವರಾಧನೆ ಮನರಂಜನೆ ಸರಕಾಗಿ ಪರಿಣಮಿಸಿದೆ. ಕಾಂತಾರ ಬಳಿಕ ಪ್ರತಿಯೊಂದು ಕಾರ್ಯಕ್ರಮ ದೈವಾರಾಧನೆಗೆ ಸಂಬoಧಿಸಿದoತೆ ಒಂದಲ್ಲಾ ಒಂದು ಕಾರ್ಯಕ್ರಮಗಳು ಇರಲಾರಂಭಿಸಿದೆ. ಇದೀಗ ಕನ್ನಡ ಖಾಸಗಿ ವಾಹಿನಿಯೊಂದರ ಸಿರಿಯಲ್ ನಲ್ಲಿ ದೈವಾರಾಧನೆಗೆ ಸಂಬoಧಿಸಿದoತೆ ದೃಶ್ಯಗಳನ್ನು ಶೂಟ್ ಮಾಡಿದ್ದು, ಸ್ವತಃ ಕರಾವಳಿಯ ನಟರೊಬ್ಬರು ಅದರಲ್ಲಿ ನಟಿಸಿದ್ದು, ಇದೀಗ ಆಕ್ರೋಶಕ್ಕೆ ಕಾರಣವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇತ್ತೀಚೆಗಷ್ಟೇ ದೈವಗಳ ಹೆಸರಲ್ಲಿ ದಂಧೆಗೆ ಇಳಿದವರ ವಿರುದ್ಧ ದೈವಾರಾಧಕರು ಕೊರಗಜ್ಜನ ಮೊರೆ ಹೋಗಿದ್ದ ಘಟನೆ ನಡೆದಿತ್ತು. ಸದ್ಯ ಈಗ ದೈವಾರಾಧನೆ ಪ್ರದರ್ಶನ ಧಾರವಾಹಿಗೂ ವ್ಯಾಪಿಸಿದ್ದು ಕರಾವಳಿಯಲ್ಲಿ ದೈವಾರಾಧಕರ ಆಕ್ರೋಶ ಭುಗಿಲೆದ್ದಿದೆ. ದಿನೇ ದಿನೇ ತುಳುನಾಡು ವಿಶಿಷ್ಟ, ಧಾರ್ಮಿಕ ಆಚರಣೆಗೆ ಧಕ್ಕೆಯಾಗುತ್ತಿದೆ ಎಂದು ದೈವಾರಾಧಕರು ಅಸಮಾಧಾನ ಹೊರ ಹಾಕಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿರಿಯಲ್ ನಲ್ಲಿ ದೈವಾರಾಧನೆ ಪ್ರದರ್ಶನ ಬೆನ್ನಲ್ಲೇ ದೈವಾರಾಧಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ದೈವದ ಪಾತ್ರ ನಿರ್ವಹಿಸಿದ ಕಲಾವಿದನ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಕಲಾವಿದ ಮಂಗಳೂರಿನ ಪ್ರಶಾಂತ್ ಸಿ.ಕೆ ಹಾಗೂ ಧಾರವಾಹಿ ನಿರ್ದೇಶಕನ ವಿರುದ್ಧ ಪ್ರಕರಣ ದಾಖಲಿಸಲು ದೈವಾರಾಧಕರು ಮುಂದಾಗಿದ್ದಾರೆ. ಯಾವುದೇ ಕಾರಣಕ್ಕೂ ಧಾರವಾಹಿ ತೆರೆ ಮೇಲೆ ಬರಬಾರದೆಂದು ಪಟ್ಟು ಹಿಡಿದಿದ್ದಾರೆ.
ಧಾರವಾಹಿಯ ಪ್ರೋಮೋ ವಿಡಿಯೋ ವೈರಲ್ ಬೆನ್ನಲ್ಲೇ ದೈವಾರಾಧಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ಮಂಗಳೂರಿನ ತುಳುನಾಡ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಹಾಗು ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದೆ. ಚಿತ್ರೀಕರಣಕ್ಕೆ ಸುಳ್ಳು ಹೇಳಿ ಬ್ಯಾಂಡ್ ವಾದ್ಯದವರನ್ನು ಕರೆಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ದೈವಸ್ಥಾನದಲ್ಲಿ ಕೋಲ ಇದೆ ಎಂದು ಹೇಳಿ ದೇವಸ್ಥಾನದ ಬ್ಯಾಂಡ್ ವಾದ್ಯದವರನ್ನು ಕರೆಸಿದ್ದಾರೆ ಎಂದು ದೈವಾರಾಧಕರ ವೇದಿಕೆ ಧಾರವಾಹಿ ತಂಡದ ಮೇಲೆ ಆರೋಪ ಮಾಡಿದ್ದಾರೆ.