Saturday, November 23, 2024
ಸುದ್ದಿ

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಪುತ್ತೂರಿನ ಅಬ್ದುಲ್ ಮನ್ನಾನ್ ನೇಮಕ – ಕಹಳೆ ನ್ಯೂಸ್

ಅಬ್ದುಲ್ ಮನ್ನಾನ್ ಬಿ.ಎಸ್.ವಿಜಯೇಂದ್ರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದು, ಬಿ.ಎಸ್ ಯಡಿಯೂರಪ್ಪ ಈ ಹಿಂದೆ ಅಬ್ದುಲ್ ಮನ್ನಾನ್ ಗೆ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಟ್ಟಿದ್ದರು. ಚುನಾವಣೆ ಸಂದರ್ಭ ಬೆಂಗಳೂರಿನಲ್ಲಿ ಪಕ್ಷದ ಪ್ರಚಾರದಲ್ಲಿ ಯುವಕರನ್ನ ಒಗ್ಗೂಡಿಸಿ ಕೆಲ ಬಿಜೆಪಿ ನಾಯಕರ ಗೆಲುವಿಗೆ ಕಾರಣರಾಗಿದ್ದು,ಕಳೆದ 17 ವರ್ಷಗಳಿಂದ ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು. ಮಂಡಲ ಅಧ್ಯಕ್ಷ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಈ ಹಿಂದೆ ಜವಾಬ್ದಾರಿ ವಹಿಸಿದ್ದು, ಎಬಿವಿಪಿ ಸಂಘಟನೆಯಲ್ಲೂ ಗುರುತಿಸಿಕೊಂಡಿದ್ದರು.ಈ ಹಿನ್ನೆಲೆ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರನ್ನಾಗಿ ಅಬ್ದುಲ್ ಮನ್ನಾನ್ ಅವರು ನೇಮಕಮಾಡಲಾಗಿದೆ ತಿಳಿದುಬಂದಿದೆ.


ಪುತ್ತೂರಿನ ಎಸ್.ಟಿಕಿಲಾ ಎಸ್.ಜಿ ಮತ್ತು ಕುರ್ರತುಲೈನ್ ಬಾನು ಅವರ ಮಗ ಮತ್ತು ಪುತ್ತೂರು ಪುರಸಭೆಯ ಉಪಾಧ್ಯಕ್ಷರಾಗಿದ್ದ ದಿ. ಅಬ್ಬು ಮಹಮ್ಮದ್ ಅವರ ಮೊಮ್ಮಗ, ಇವರು ಪ್ರೌಢ ಶಿಕ್ಷಣವನ್ನು ಪುತ್ತೂರಿನಲ್ಲಿ ಮಾಡಿ, ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ. ವಿದೇಶದಲ್ಲಿ ಆಯಿಲ್ ಕಂಪೆನಿಯಲ್ಲಿ ನಿವೃತ್ತಿ ಹೊಂದಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದ ಅವರನ್ನು ವಿಶ್ವಹಿಂದು ಪರಿಷದ್ ರಾಜ್ಯ ಉಪಾಧ್ಯಕ್ಷ ಯು ಪೂವಪ್ಪ ಅವರ ಆದೇಶದಂತೆ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಗೆ ಕಳುಹಿಸಿದ್ದರು. ಅಲ್ಲಿ ಅವರಿಗೆ ಬಿ.ಎಸ ಯಡಿಯೂರಪ್ಪರವರು ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಟ್ಟಿದ್ದರು. ಪ್ರಸ್ತುತ ಬೆಂಗಳೂರು ದಕ್ಷಿಣ ಜಿಲ್ಲಾ ಬಿ.ಜೆ.ಪಿ. ಘಟಕದ ವ್ಯಾಪ್ತಿಯ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ನಿವಾಸಿಯಾಗಿರುವ ಅಬ್ದುಲ್ ಮನ್ನನ್ ಟಿ ಎಸ್. ರವರು ತಮ್ಮ ವಿದ್ಯಾರ್ಥಿ ಜೀವನದಲ್ಲೇ ಎ.ಬಿ.ವಿ.ಪಿ. ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರಲ್ಲದೇ, ಇವರು ಮಂಡಲದ ಅಧ್ಯಕ್ಷನಾಗಿ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿರುತ್ತಾರೆ. ಕಳೆದ 17 ವರ್ಷಗಳಿಂದ ಬಿಜೆಪಿ ಸಕ್ರಿಯ ಕಾರ್ಯಕರ್ತರಾಗಿ ಪಕ್ಷ ನೀಡಿರುವ ಹಲವಾರು ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಆದುದರಿಂದ ಅಬ್ದುಲ್ ಮನ್ನನ್ ಟಿ ಎಸ್. ರವರಿಗೆ ಕರ್ನಾಟಕ ರಾಜ್ಯ ಭಾರತೀಯ ಜನತಾ ಪಾರ್ಟಿಯ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಘಟಕದಲ್ಲಿ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿ ಪಕ್ಷದ ರಾಜ್ಯ ಅಧ್ಯಕ್ಷರಾದ ವಿಜಯೇಂದ್ರ ರವರ ನೇತೃತ್ವದಲ್ಲಿಗುರುತಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು