Recent Posts

Monday, January 20, 2025
ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು : ಚಾಲಕ ಮೃತ್ಯು…!!– ಕಹಳೆ ನ್ಯೂಸ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು – ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ಸೀಟು – ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಸಂಭವಿಸಿದೆ.

ರಾಣಿಬೆನ್ನೂರು ತಾಲೂಕು ಹಾವೇರಿಯ ಚಾಲಕ ಶ್ರೀಧರ ಸಣ್ಣ ನಿಂಗನವರ್‌ ಮೃತಪಟ್ಟವರು. ರಾಣಿಬೆನ್ನೂರು ತಾಲೂಕು ಹಾವೇರಿಯ ಮನೋಜ್‌ ಕುಮಾರ್‌ ಮತ್ತು ಮನೆಯವರು ಬೆಳ್ತಂಗಡಿ ಕಡೆಯಿಂದ ಕೊಟ್ಟಿಗೆಹಾರದ ಕಡೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಮರಕ್ಕೆ ಢಿಕ್ಕಿಯಾಗಿದ್ದು, ಚಾಲಕ ಶ್ರೀಧರ ಸಣ್ಣ ನಿಂಗನವರ್‌ ಗಂಭೀರ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿಯಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರಿನಲ್ಲಿದ್ದ ಮನೋಜ್‌ ಕುಮಾರ್‌ ಅವರ ತಾಯಿ ರೆಜಿನಾ ಗ್ಲೋರಿ ಹಾಗೂ ತಂಗಿ ಪ್ರಾರ್ಥನಾ ಗಾಯಗೊಂಡಿದ್ದು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು