Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಈಶ್ವರಮಂಗಲ : ವಸತಿ ನಿಲಯದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ : ವಿದ್ಯಾರ್ಥಿಗಳಿಂದ ಪ್ರತಿಭಟನೆ – ಕಹಳೆ ನ್ಯೂಸ್

ಈಶ್ವರಮಂಗಲ : ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯ ವಸತಿ ನಿಲಯದ ಅಡುಗೆಯವರಾದ ಪಿ. ಮಹಮ್ಮದ್ ನಜೀತ್ ವಸತಿ ನಿಲಯದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆಂದು ಸಮಾಜ ಕಲ್ಯಾಣಾಧಿಕಾರಿಗಳಿಗೆ ದೂರು ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ವಿದ್ಯಾರ್ಥಿಗಳು ಮೇಲ್ವಿಚಾರರಿಗೆ ದೂರು ನೀಡಿದ್ದು, ಮುಖ್ಯಗುರುಗಳು ಪುತ್ತೂರು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಮಾಜ ಕಲ್ಯಾಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಫೆ.1 ರಂದು ಶಾಲೆಯ 8ನೇ ತರಗತಿಯ ವಸತಿ ನಿಲಯದ ವಿದ್ಯಾರ್ಥಿಗಳು ಸಂಜೆ ತರಗತಿಯಿಂದ ಹಿಂದಿರುಗಿದ ನಂತರ ವಸತಿ ನಿಲಯದಲ್ಲಿ ಅಡುಗೆಯವರಾದ ಪಿ. ಮಹಮ್ಮದ್ ನಜೀತ್ ಪ್ರೌಢಶಾಲಾ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ್ದಾರೆ. ಆ ಸಮಯದಲ್ಲಿ ಭಯಬೀತರಾದ ವಿದ್ಯಾರ್ಥಿಗಳು ದೈಹಿಕ ಶಿಕ್ಷಣ ಶಿಕ್ಷಕರಿಗೆ ವಿಷಯ ತಿಳಿಸಿದ್ದು, ಮುಖ್ಯಗುರುಗಳು ಸಮಾಜ ಕಲ್ಯಾಣಾಧಿಕಾರಿಯವರಿಗೆ ಹಾಗೂ ವಸತಿ ನಿಲಯಪಾಲಕರಿಗೆ ತಿಳಿಸಿರುತ್ತಾರೆ.

ಅನೇಕ ಬಾರಿ ಇದೇ ಅಡುಗೆಯವರ ಮೇಲೆ ವಿದ್ಯಾರ್ಥಿಗಳಿಂದ ದೂರುಗಳು ಬಂದಿದ್ದು, ಇಲಾಖಾ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲದ ಕಾರಣ, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಹಾಗೂ ಪೋಷಕರ ಸೂಚನೆಯ ದೂರನ್ನು ಸಲ್ಲಿಸುತ್ತಿದ್ದೇವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ವಿದ್ಯಾರ್ಥಿಗಳು ಗೇಟಿನ ಮುಂಭಾಗ ಕುಳಿತುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.