Recent Posts

Monday, January 20, 2025
ಸುದ್ದಿ

ಮಂಗಳೂರು : ಆಕ್ರೋಶಕ್ಕೆ ಮಣಿದ ಜೆರೋಸಾ ಶಾಲೆಯ ಆಡಳಿತ ಮಂಡಳಿ : ಶಿಕ್ಷಕಿ ಸಿಸ್ಟರ್ ಪ್ರಭಾ ಅಮಾನತು – ಕಹಳೆ ನ್ಯೂಸ್

ಮಂಗಳೂರು : ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ.


ಮಂಗಳೂರಿನ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಅಯೋಧ್ಯೆ ರಾಮಮಂದಿರ ಹಾಗೂ ಪ್ರಭು ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಪೋಷಕರ ಬಳಿ ಹೇಳಿದ್ದರು. ಇದು ವಿವಾದಕ್ಕೆ ಕಾರಣಾಗಿತ್ತು.
ಇನ್ನು ಶಿಕ್ಷಕಿಯ ಮಾತಿಗೆ ಹಿಂದೂ ಸಂಘಟನೆಗಳು, ರಾಜಕೀಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿ ಶಿಕ್ಷಕಿಯ ಅಮಾನತಿಗೆ ಆಗ್ರಹಿಸಿದ್ದರು. ಇಂದು ಶಾಲೆಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ಆಕ್ರೋಶಿತರು ಜಮಾವಣೆಗೊಂಡಿದ್ದು. ಹಿಂದೂ ವಿದ್ಯಾರ್ಥಿಗಳ ಪೋಷಕರೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಕೂಡ ಆಗಮಿಸಿದ್ದು, ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರೆನ್ನಲಾಗಿದೆ. ಈ ವೇಳೆ ಶಾಲೆ ಗೇಟ್ ಮುಂಭಾಗ ಶಾಸಕ ಹಾಗೂ ಪೋಷಕರನ್ನು ಪೊಲೀಸರು ತಡೆದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿಯನ್ನು ಅಮಾನತು ಮಾಡಿದ್ದಾಗಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಲೆಯ ಮುಂಭಾಗ ಜಮಾವಣೆಗೊಂಡ ಪೋಷಕರು ಶಿಕ್ಷಕಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಪ್ರತಿಭಟನಾ ನಿರತ ಪೋಷಕರ ಮುಂದೆ ಆಗಮಿಸಿದ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿ ಪ್ರಭಾ ಅವರನ್ನು ಅಮಾನತು ಮಾಡಿದ್ದಾಗಿ ತಿಳಿಸಿದರು ಎಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು