Sunday, November 24, 2024
ಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಮತದಾನ ಮಾಡುವುದು ಎಲ್ಲರ ಕರ್ತವ್ಯ. ಯಾವುದೇ ಆಸೆ,ಆಮಿಷಗಳಿಗೆ ಬಲಿಯಾಗದೆ ಸ್ವ ಇಚ್ಛೆಯಿಂದ ಮತದಾನ ಮಾಡುವುದು ಮುಖ್ಯ. ವಿದ್ಯಾರ್ಥಿಗಳಾದವರು ಸಂವಿಧಾನದ ಮೌಲ್ಯವನ್ನುಅರಿತುಕೊಂಡು ಮುಂದೆ ಸಾಗಬೇಕು ಎಂದು ಪುತ್ತೂರು ವಿಭಾಗದ ಸಹಾಯಕ ಕಮಿಷನರ್ ಜುಬಿನ್ ಮೊಹಪಾತ್ರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.


ಇವರು ವಿವೇಕಾನಂದ ಕಲಾವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಪುತ್ತೂರು ಇಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕಾಲೇಜಿನ ಕಲಾ ವಿಭಾಗ ದಡೀನ್ ಹಾಗೂ ಹಿಂದಿ ವಿಭಾಗದ ಮುಖ್ಯ ಸ್ಥೆಡಾ. ದುರ್ಗಾರತ್ನ.ಸಿ ವಿದ್ಯಾರ್ಥಿಗಳಿಗೆ ಸಂವಿಧಾನ ಪ್ರತಿಜ್ಞಾ ವಿಧಿ ನಡೆಸಿಕೊಟ್ಟರು.ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂವಿಧಾನ ಜಾಗೃತಿಜಾಥಾ ಸ್ಥಬ್ಧ ಚಿತ್ರವನ್ನು ಹೊಂದಿರುವ ರಥವನ್ನು ಬ್ಯಾಂಡ್ ಪಾರ್ಟಿ ಮತ್ತು ಎನ್.ಸಿ.ಸಿ ವಿದ್ಯಾರ್ಥಿಗಳ ಪಥ ಸಂಚಲನದೊAದಿಗೆ ಕಾಲೇಜಿನ ಆವರಣದತ್ತ ಸ್ವಾಗತಿಸಲಾಯಿತು.
ಕಾರ್ಯಕ್ರಮದಲ್ಲಿ ಪುತ್ತೂರಿನ ತಹಶೀಲ್ದಾರ್ ಪುರಂದರ ಹೆಗ್ಡೆ, ಸಂತ ಫಿಲೋಮಿನಾಕಾಲೇಜು ಪುತ್ತೂರಿನ ಪ್ರಾಂಶುಪಾಲ ಡಾ. ಆಂಟೋನಿ ಪ್ರಕಾಶ್ ಮೊಂತೆರೊ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವೇಕಾನಂದ ಕಾಲೇಜಿನ ಯಶಸ್ ಘಟಕದ ವಿದ್ಯಾರ್ಥಿಗಳಿಂದ ಸಂವಿಧಾನದ ರಕ್ಷಣೆ ಮತ್ತು ಕರ್ತವ್ಯದ ಬಗ್ಗೆ ಬೀದಿ ನಾಟಕ, ಡಾ.ಬಿ.ಆರ್‌ಅಂಬೇಡ್ಕರ್ ವಸತಿ ಶಾಲೆ ಉಪ್ಪಿನಂಗಡಿ ವಿದ್ಯಾರ್ಥಿಗಳಿಂದ ಸಂವಿಧಾನದ ಆಶಯವನ್ನು ನೃತ್ಯದ ಮೂಲಕ ತೋರಿಸಿದರು. ಅಂಬೇಡ್ಕರ್ ಅವರ ತತ್ವ ಆದರ್ಶಗಳ ಬಗ್ಗೆ ಸಂತ ಫಿಲೋಮಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣುಗಣಪತಿ ಭಟ್ ಸ್ವಾಗತಿಸಿ,ರೋವರ್ ಸಂಯೋಜಕಡಾ. ಈಶ್ವರ ಪ್ರಸಾದ್ ಕೆ ಎಸ್ ನಿರ್ವಹಿಸಿದರು.